ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ವಿಫಲ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಫಲವಾಗಿಲ್ಲ, ಇದರ ವಿಫಲತೆ  ಇತ್ತೀಚೆಗೆ ನಡೆದ ಚಳಿಗಾಲದ ಅಧಿವೇಶನದಲ್ಲಿ ಜಾಹೀರಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಜಂಟಿ ಸರ್ಕಾರ ಮೊದಲು ರೂ.53 ಸಾವಿರ ಕೋಟಿ ರೈತರ ಕೃಷಿ ಸಾಲಮನ್ನಾ ಮಾಡುವ ಭರವಸೆ ನೀಡಿತ್ತು, ಆದರೆ ಬಳಿಕ  ಅದನ್ನು ರೂ. 34 ಸಾವಿರ ಕೋಟಿಗೆ ಇಳಿಸಿತ್ತು.  ಅದನ್ನು ಕಳೆದ ಬಜೆಟ್‌ನಲ್ಲಿ ರೂ. 6.5 […]