ವಿಧಾನ ಪರಿಷತ್ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ದ್ವಿಸದಸ್ಯ ಕ್ಷೇತ್ರ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಮಂಗಳೂರು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಚುನಾವಣಾಧಿಕಾರಿ ಆಗಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ಕೋಟ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವ ಎಸ್. ಅಂಗಾರ, ಬಿಜೆಪಿ […]