ಕೋಟ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ
ಕೋಟ: ನಿನ್ನೆ ನಾಪತ್ತೆಯಾಗಿದ್ದ ವಕ್ವಾಡಿ ನವನಗರ ನಿವಾಸಿ ರವಿಚಂದ್ರ ಕುಲಾಲ್ (33) ಶವ ಮರಕ್ಕೆ ನೇಣುಬಿಗಿದ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದೆ. ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ರವಿಚಂದ್ರನ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ತನ್ನ ಆಟೋ ರಿಕ್ಷಾವನ್ನು ವಕ್ವಾಡಿ ನವನಗರ ತಿರುವಿನಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದನು. ರವಿಚಂದ್ರ ಹಾಕಿದ್ದ ವಾಟ್ಸಾಪ್ ಸ್ಟೇಟಸ್ ನಿಂದ ಅನುಮಾನಗೊಂಡ ಸ್ನೇಹಿತರು ಹಾಗೂ ಮನೆಯವರು ಸತತವಾಗಿ ಕರೆ ಮಾಡಿದ್ದರು. ಆದರೆ, ರವಿಚಂದ್ರ ಯಾವುದೇ ಕರೆ ಸ್ವೀಕರಿಸಿರಲಿಲ್ಲ. ಕೊನೆಗೆ ಸ್ನೇಹಿತರು, ಮನೆಯವರು […]