ಕೋಟದಲ್ಲಿ ಎರಡು ದಿನಗಳ ಯಕ್ಷ ತ್ರಿವಳಿ ಮಕ್ಕಳ ಯಕ್ಷೋತ್ಸವ ಉದ್ಘಾಟನೆ

ಉಡುಪಿ: ಯಕ್ಷಗಾನ ಕಲೆಯ ಬೆಳವಣಿಗೆಗೆ ವಿವಿಧ ಕಾರ್ಯಾಗಾರಗಳ ಮೂಲಕ ಪ್ರೋತ್ಸಾಹ ನೀಡುತ್ತಿರುವ ಯಕ್ಷಗಾನ ಅಕಾಡೆಮಿ ಅಭಿನಂದನಾರ್ಹ. ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆ ಸರಕಾರದಿಂದ ಸಿಗುವ ಸರಕಾರಿ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ತಿಳಿಸಿದರು. ಅವರು ಗುರುವಾರ ಕೋಟದ ಶ್ರೀ ಹಂದೆ ವಿಷ್ಣುಮೂರ್ತಿ ಶ್ರೀ ವಿನಾಯಕ ದೇವಸ್ಥಾನದ ನಾಗಪ್ಪಯ್ಯ ಸಭಾಂಗಣದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಸಹಕಾರದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ ತನ್ನ ಸುವರ್ಣ ಪರ್ವದ 9ನೇ ಕಾರ್ಯಕ್ರಮವಾಗಿ ಹಮ್ಮಿಕೊಂಡ ಆಹ್ವಾನಿತ […]