ಸಂವಿಧಾನದ ಆಶಯದ ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕ್ರೀಡೆ ಸಹಕಾರಿ: ಡಾ. ಅಶ್ವಥ್ ನಾರಾಯಣ್

ಉಡುಪಿ: ದೈಹಿಕ ಮತ್ತು ಮಾನಸಿಕ ಸಮಸ್ಯೆಗಳ ನಿವಾರಣೆ ಸೇರಿದಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಎದುರಿಸಲು ಅಗತ್ಯವಿರುವ ಶಕ್ತಿಯನ್ನು ಕ್ರೀಡೆಯಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪಡೆಯಬಹುದು. ಇಂತಹ ಚಟುಚಟಿಕೆಯಲ್ಲಿ ಭಾಗವಹಿಸುವ ಮೂಲಕ ಸಂವಿಧಾನದ ಆಶಯದಂತೆ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕ್ರೀಡೆಯ ಮೂಲಕ ಸಮರ್ಥವಾಗಿ ನೀಡಬಹುದಾಗಿದ್ದು, ಸಂವಿಧಾನದ ಆಶಯಗಳಿಗೆ ಎಲ್ಲರೂ ಬದ್ದರಾಗಿರಬೇಕು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ […]

ಕೋಟ: ಸುಗಂಧಿ ಮಕ್ಕಳ ಚಲನಚಿತ್ರ ಪ್ರದರ್ಶನ ಸಪ್ತಾಹ

ಕೋಟ: ವಿವೇಕ ಬಾಲಕಿಯರ ಫ್ರೌಢಶಾಲೆಯ ಆವರಣದ ಸ್ವರ್ಣಭವನದಲ್ಲಿ ಹಮ್ಮಿಕೊಳ್ಳಲಾದ ಮಕ್ಕಳ ದಿನಾಚರಣೆ ಅಂಗವಾಗಿ ಬೆಂಗಳೂರು ಅಂತರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಕಾರಂತ ಜೀವನ ಪ್ರೇರಿತ ಮಕ್ಕಳ ಚಲನಚಿತ್ರ ಸುಗಂಧಿ ಇದರ ಉಚಿತ ಪ್ರದರ್ಶನ ಸಪ್ತಾಹ ಕಾರ್ಯಕ್ರಮವು ಸೋಮವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಇಂದು ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯರು ಸಾಧನೆ ಮಾಡಿದ್ದಾರೆ ಎಂದರು. ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಸುಗಂಧಿ ಚಲನಚಿತ್ರವು ಕಲೆಯಲ್ಲಿನ ಮೌಢ್ಯವನ್ನು ಎತ್ತಿ ಹಿಡಿಯುವಂತಿದೆ. ಚಿತ್ರವು ಯಶಸ್ವಿಯಾಗಿ […]

ಕೋಟ: ಉದ್ಯಮಿ ಹರಿದಾಸ್ ಭಟ್ ನಿಧನ

ಕೋಟ: ಹಳ್ಳಾಡಿ ಹರ್ಕಾಡಿ ಗ್ರಾಮದ ಗಾವಳಿ ನಿವಾಸಿ ಉದ್ಯಮಿ ಹರಿದಾಸ್ ಭಟ್ (60) ಅಸೌಖ್ಯದಿಂದ ಭಾನುವಾರದಂದು ನಿಧನ ಹೊಂದಿದ್ದಾರೆ. ಇವರು ಗೇರು ಉದ್ಯಮಿಯಾಗಿದ್ದರು ಹಾಗೂ ಹಳ್ಳಾಡಿ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ, ಜೈ ಗಣೇಶ್ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿ, ಜಿ.ಎಸ್.ಬಿ.‌ಸೇವಾ ಸಂಘ‌ ಶಿರಿಯಾರದ ಪದಾಧಿಕಾರಿಯಾಗಿ, ಹವ್ಯಾಸಿ ಯಕ್ಷಗಾನ ತಾಳಮದ್ದಲೆಕಾರರಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಸಾಲಿಗ್ರಾಮ: ಅ. 15 ರಂದು ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ

ಸಾಲಿಗ್ರಾಮ: ಗೆಳೆಯರ ಬಳಗದ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆ ಅಂಗವಾಗಿ ಅ.15 ರಂದು ಸಂಜೆ 6 ಗಂಟೆಗೆ ಕಾರ್ಕಡದ ಗಿರಿಜಾ ಕಲ್ಯಾಣ ಮಂತಪದಲ್ಲಿ ಕಾರಂತರ ಸಂಸ್ಮರಣೆ ಹಾಗೂ ಕಾರಂತ ಪುರಸ್ಕಾರ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಇವರು ವಹಿಸಿಕೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ಮೊಗೇರಿ ಜಯರಾಮ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮತ್ತು ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ ಡಾ. […]

ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ

ಕೋಟ: ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿ ದೇವಸ್ಥಾನದಲ್ಲಿ ಸೆ.26 ಸೋಮವಾರದಿಂದ ಅ. 05 ಬುಧವಾರದವರೆಗೆ ಶರನ್ನವರಾತ್ರಿಯ ಅಂಗವಾಗಿ ಪ್ರತಿದಿನ ಚಂಡಿಕಾ ಸಪ್ತಶತಿ ಪಾರಾಯಣ, ದುರ್ಗಾಹೋಮ, ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ, ಸಕಲ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಈ ದೇವತಾ ಕಾರ್ಯಕ್ಕೆ ತಾವೆಲ್ಲರೂ ಆಗಮಿಸಿ, ಶ್ರೀದೇವಿಯ ಪವಿತ್ರ ಕುಂಕುಮ ಪ್ರಸಾದವನ್ನು ಸ್ವೀಕರಿಸಿ ಸಪರಿವಾರ ಶ್ರೀ ಅಮೃತೇಶ್ವರೀ ಹಲವು ಮಕ್ಕಳ ತಾಯಿಯ ಸಂಪೂರ್ಣ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಅಪೇಕ್ಷಿಸುವ, ಆನಂದ ಸಿ.ಕುಂದರ್ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಪ್ರಶಾಂತ್ […]