ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಚಿತ್ರನಟ ರಮೇಶ್ ಅರವಿಂದ್ ಆಯ್ಕೆ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇದರ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. […]

ತ್ರಿವರ್ಣದ ಬೆಳಕಿನಲ್ಲಿ ಮಿನುಗಿದ ಸ್ವಾಮಿ ವಿವೇಕಾನಂದರ ಪ್ರತಿಮೆ

ಕೋಟ: 75ನೆಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್ ಟ್ರಸ್ಟ್ ನ ಅಂಗಸಂಸ್ಥೆಯಾದ ಕೋಟ, ಮೂಡುಗಿಳಿಯಾರು ಯೋಗಬನದ ಸರ್ವ ಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನದಲ್ಲಿರುವ ಜಗತ್ತಿನ ಅತಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ತ್ರಿವರ್ಣ ಸೊಬಗಿನಿಂದ ಅಲಂಕರಿಸಲಾಯಿತು.

ಕೋಟ: ನವೀಕೃತ ಫೇವರೇಟ್ ಬಿಲ್ಡಿಂಗ್ ನಲ್ಲಿ ಶ್ರೀದೇವಿ ಜ್ಯುವೆಲ್ಲರ್ಸ್ ಶುಭಾರಂಭ

ಕೋಟ: 35 ಸಂವತ್ಸರಗಳ ಚಿನ್ನದ ವ್ಯವಹಾರದಲ್ಲಿ ವಿಶ್ವಾಸರ್ಹತೆಯೊಂದಿಗೆ ಕೋಟದ ಹೃದಯ ಭಾಗದಲ್ಲಿ ನವೀಕರಣಗೊಂಡ ಫೇವರೇಟ್ ಬಿಲ್ಡಿಂಗ್ ನ ಐತಾಳ್ ಕಾಂಪ್ಲೆಕ್ಸ್ ನಲ್ಲಿ ಶ್ರೀದೇವಿ ಜ್ಯುವೆಲ್ಲರ್ಸ್ ನ ಉದ್ಘಾಟನಾ ಸಮಾರಂಭವು ಆಗಸ್ಟ್ 5 ರಂದು ಶುಕ್ರವಾರ ಬೆಳಿಗ್ಗೆ ಜರುಗಿತು. ಕಟ್ಟಡದ ಮಾಲಕಿ ಶ್ರೀಮತಿ ಪೂರ್ಣಿಮಾ ಶಂಕರ್ ಹೆಗ್ಡೆ ಉದ್ಘಾಟನೆಯನ್ನು ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮೊಕೇಸರ ಆನಂದ್ ಸಿ.ಕುಂದರ್, ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸಂಘದ ಅಧ್ಯಕ್ಷ […]

ಕೋಟ: ಶ್ರೀ ದೇವಿ ಜ್ಯುವೆಲ್ಲರ್ಸ್ ಉದ್ಘಾಟನಾ ಸಮಾರಂಭ

ಕೋಟ: 35 ಸಂವತ್ಸರಗಳ ಚಿನ್ನದ ವ್ಯವಹಾರದಲ್ಲಿ ವಿಶ್ವಾಸರ್ಹತೆಯೊಂದಿಗೆ ಕೋಟದ ಹೃದಯ ಭಾಗದಲ್ಲಿ ನವೀಕರಣಗೊಂಡ ಫೇವರೇಟ್ ಬಿಲ್ಡಿಂಗ್ ನ ಐತಾಳ್ ಕಾಂಪ್ಲೆಕ್ಸ್ ನಲ್ಲಿ ಶ್ರೀದೇವಿ ಜ್ಯುವೆಲ್ಲರ್ಸ್ ನ ಉದ್ಘಾಟನಾ ಸಮಾರಂಭವು ಆಗಸ್ಟ್ 5 ರಂದು ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಜರುಗಲಿರುವುದು. ಕಟ್ಟಡದ ಮಾಲಕಿ ಶ್ರೀಮತಿ ಪೂರ್ಣಿಮಾ ಶಂಕರ್ ಹೆಗ್ಡೆ ಉದ್ಘಾಟನೆ ನೆರವೇರಿಸಲಿರುವರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶ್ರೀ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮೊಕೇಸರ ಆನಂದ್ ಸಿ.ಕುಂದರ್, ಶ್ರೀ ವಿರಾಡ್ವಿಶ್ವಬ್ರಾಹ್ಮಣ […]

ಕೋಟ: ಜುಲೈ 8 ರಂದು ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಅಹವಾಲು ಸ್ವೀಕಾರ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 8 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.