ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಿಶ್ವಕರ್ಮ ಭಾನುವಾರದಂದು ಕೋಟಾ ಕ್ಕೆ ಆಗಮನ

ಉಡುಪಿ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ(ರಿ) ರಾಜ್ಯಾಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ಜೂನ್ 12 ರಂದು ಭಾನುವಾರ ಬೆಳಿಗ್ಗೆ 9.30 ಗಂಟೆಗೆ ಕೋಟಕ್ಕೆ ಆಗಮಿಸಲಿದ್ದಾರೆ. ಕೋಟ ಮಾಂಗಲ್ಯ ಮಂದಿರದಲ್ಲಿ ನಡೆಯಲಿರುವ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕೋಟ ಹೋಬಳಿಯ ಯುವ ಘಟಕ ಉದ್ಘಾಟನೆ, ವಿಶ್ವಕರ್ಮ ಸಮಾಜದ ವಿವಿಧ ಕ್ಷೇತ್ರಗಳ‌ ಸಾಧಕರ ಸನ್ಮಾನ, ಎಸ್.ಎಸ್.ಎಲ್.ಸಿ ಯಲ್ಲಿ 600 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಯುವಘಟಕಾಧ್ಯಕ್ಷ ಶ್ರೀನಿವಾಸ ಮಳವಳ್ಳಿ ಉಪಸ್ಥಿತರಿರಲಿದ್ದಾರೆ. […]

ಕೋಟ, ಸುನಿಲ್ ಕುಮಾರ್ ಗೆ ಮಂತ್ರಿ ಸ್ಥಾನ : ಪೆರಂಪಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಪೆರಂಪಳ್ಳಿ: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಿದ ಹಿನ್ನೆಲೆಯಲ್ಲಿ ಪೆರಂಪಳ್ಳಿ ಬಿಜೆಪಿ ಘಟಕದ ವತಿಯಿಂದ ಕಾರ್ಯಕರ್ತರು ಪೆರಂಪಳ್ಳಿ ಪೇಟೆಯಲ್ಲಿ ಸಂಭ್ರಮಾಚರಣೆ ನಡೆಸಿದರು.‌‌‌ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಬೊಮ್ಮಾಯಿ ಸಂಪುಟದಲ್ಲಿ‌ ಉಡುಪಿ ಜಿಲ್ಲೆಗೆ ಡಬಲ್ ಧಮಾಕ; ಸುನಿಲ್ ಕುಮಾರ್, ಕೋಟಾಗೆ ಮಂತ್ರಿ ಭಾಗ್ಯ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಉಡುಪಿ ಜಿಲ್ಲೆಗೆ ಜಾಕ್ ಪಾಟ್ ಹೊಡೆದಿದ್ದು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಿದೆ. ಕೋಟ ಮತ್ತು ಸುನಿಲ್ ಇಬ್ಬರೂ ಆರ್ ಎಸ್ಎಸ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ರಾಜಕೀಯದಲ್ಲಿ ಕ್ಲೀನ್ ಇಮೇಜ್ ಹೊಂದಿರುವ ನಾಯಕರಾಗಿದ್ದಾರೆ. ಇಬ್ಬರೂ ಬಿಲ್ಲವ ಸಮುದಾಯಕ್ಕೆ ಸೇರಿದವರಾಗಿದ್ದು, ಸಹಜವಾಗಿಯೇ ಸಮುದಾಯದ ಶೀರಕ್ಷೆಯೂ ಇವರ ಮೇಲಿದೆ. ಈ ಎಲ್ಲ ಕಾರಣಗಳಿಂದ ಒಂದೇ ಜಿಲ್ಲೆಯವರಾಗಿದ್ದರೂ […]

ಕೋಟ: ವಿಶ್ವ ಜನಸಂಖ್ಯಾ ದಿನಾಚರಣೆ

ಉಡುಪಿ, ಜುಲೈ 26: ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಕಚೇರಿ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯು ಗುರುವಾರ ನಡೆಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಸದಸ್ಯೆ ಲಲಿತಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಉದ್ಘಾಟಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಟ ಮಣೂರು ಲಕ್ಷ್ಮೀ ಸೋಮ ಬಂಗೇರ ಸರಕಾರಿ […]

ಮೇ.7: ಕೋಟ ಹಂದೆ ಮಹಾವಿಷ್ಣು ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರೆ, ರಥೋತ್ಸವ ಸಂಭ್ರಮ

ಬ್ರಹ್ಮಾವರ: ಕೋಟ ಹಂದೆ ಮಹಾವಿಷ್ಣು ಮಹಾಗಣಪತಿ ದೇವಸ್ಥಾನದ ರಥೋತ್ಸವ ಮೇ. 7ರಂದು ನಡೆಯಲಿದೆ. ಕೋಟ ಹೈಸ್ಕೂಲ್ ಹತ್ತಿರದಲ್ಲಿ ಹಂದಟ್ಟು ಗ್ರಾಮದಲ್ಲಿರುವ ಹಂದೆ ‘ರಥೋತ್ಸವದ ಪ್ರಯುಕ್ತ  ಈಗಾಗಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಮೇ. 6ರಂದು ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೋಟದ ಜ್ಞಾನದೀಪ ನೃತ್ಯ ಕಲಾಕೇಂದ್ರ ಇವರಿಂದ ನೃತ್ಯ ವೈಭವ, 8ಕ್ಕೆ ಬೆಂಗಳೂರಿನ ಯಕ್ಷದೇಗುಲ ತಂಡದವರಿಂದ ವಾರಂಬಳ್ಳಿ ವೆಂಕಪ್ಪಯ್ಯ ವಿರಚಿತ ‘ಸೌಗಂಧಿಕ ಪುಷ್ಪಾಪಹರಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. 7ರ ಸಂಜೆ 5ಕ್ಕೆ ಇನಿದನಿ ಬಳಗ ಕೋಟ ಇವರಿಂದ […]