ಕೋಟ: ಫೆ. 24ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ‘ಭರವಸೆ’ ಎಂಬ ಶೀರ್ಷಿಕೆಯಡಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮ ಇದೇ 24ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, […]