ಕೋಟೇಶ್ವರ: ನ.22ರಿಂದ ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಂಘದ 43ನೇ ವಾರ್ಷಿಕ ಸಮ್ಮೇಳನ “KOSCON-2024”
ಉಡುಪಿ: ಉಡುಪಿ ನೇತ್ರ ತಜ್ಞರ ಸಂಘ, ಐ ಬೀಚ್ ಫಿಲ್ಮ್ ಫೆಸ್ಟಿವಲ್ ಹಾಗೂ ಮಾಹೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ನೇತ್ರ ತಜ್ಞರ ಸಂಘದ 43ನೇ ವಾರ್ಷಿಕ ಸಮ್ಮೇಳನ “KOSCON-2024” ಕೋಟೇಶ್ವರದ ಯುವ ಮೆರಿಡಿಯನ್ ಕನ್ ವೆನ್ಷನ್ ಸೆಂಟರ್ ನಲ್ಲಿ ಇದೇ ನ. 22ರಿಂದ 24ರವರೆಗೆ ನಡೆಯಲಿದೆ ಎಂದು ಪ್ರಸಾದ್ ನೇತ್ರಾಲಯ ಸಮೂಹ ನೇತ್ರ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕ ಹಾಗೂ ಕರ್ನಾಟಕ ನೇತ್ರ ತಜ್ಞರ ಸಂಘದ ಅಧ್ಯಕ್ಷ ಡಾ. ಕೃಷ್ಣ ಪ್ರಸಾದ್ ಕೂಡ್ಲು ತಿಳಿಸಿದರು. […]