ಕೋಟೇಶ್ವರ ಕೋಡಿ ಹಬ್ಬ ಗಮ್ಮತ್ತೋ ಗಮ್ಮತ್ತ್: ವೈಭವದ ರಥೋತ್ಸವದಲ್ಲಿ ಮಿಂದೆದ್ದ ಊರು
![](https://udupixpress.com/wp-content/uploads/2019/12/IMG_4632.jpg)
ಶ್ರೀಕಾಂತ ಹೆಮ್ಮಾಡಿ, ಕುಂದಾಪುರ ಕುಂದಾಪುರ: ಕರ್ನಾಟಕ ಕರಾವಳಿಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಇಲ್ಲಿನ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಕೊಡಿ ಹಬ್ಬ ವಿಜೃಂಭಣೆಯಿಂದ ಜರುಗಿತು. ಗುರುವಾರ ನಡೆದ ವೈಭವದ ಬ್ರಹ್ಮ ರಥೋತ್ಸವಕ್ಕೆ ಊರ ಹಾಗೂ ಪರವೂರಿನಿಂದ ಬಂದ ಸಾವಿರಾರು ಮಂದಿ ಸಾಕ್ಷಿಯಾದರು. ಈ ಬಾರಿಯ ಕೊಡಿ ಹಬ್ಬಕ್ಕಾಗಿ ಗುರುವಾರ ನಸುಕಿನಿಂದಲೆ ಧಾರ್ಮಿಕ ಆಚರಣೆಯಲ್ಲಿ ಭಾಗಿಯಾಗಿದ್ದ ಭಕ್ತರು ಮಧ್ಯಾಹ್ನ ೧೨.೪೦ ಕ್ಕೆ ನಡೆದ ವೈಭವದ ರಥೋತ್ಸವದ ಆರೋಹಣವನ್ನು ನೋಡಿ ಕಣ್ಮನ ತುಂಬಿಕೊಂಡರು. ನಸುಕಿನಲ್ಲಿ ಇತಿಹಾಸ ಪ್ರಸಿದ್ದ ಕೋಟಿ ತೀರ್ಥ […]