ನ. 27 ರಂದು ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ರಥೋತ್ಸವ
ಕುಂದಾಪುರ: ನ.27 ರಂದು ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಬೆಳಿಗ್ಗೆ 11.30 ಕ್ಕೆ ಜರಗಲಿದೆ. ರಾತ್ರಿ 8 ಗಂಟೆಗೆ ಅರೆಹೊಳೆ ಪ್ರತಿಷ್ಠಾನದ ನಂದಗೋಕುಲದ ಕಲಾವಿದರಿಂದ ನೃತ್ಯ ವರ್ಷಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ನ. 28 ರಂದು ಚೂರ್ಣೋತ್ಸವ, ಅವಭೃತ ಸ್ನಾನ ರಾತ್ರಿ ಓಕುಳಿ ಸೇವೆ ನಡೆಯಲಿದೆ. ವಿದುಷಿ ಭಾಗೀರಥಿ ಎಂ ರಾವ್ ಶಿಷ್ಯ ವೃಂದದವರಿಂದ ನೃತ್ಯ ಸೌರಭ ಕಾರ್ಯಕ್ರಮ ಜರಗಲಿದೆ.
ಕುಂದಾಪುರ: ಕರ್ನಾಟಕ ರಾಜ್ಯ (ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಶುಭಾರಂಭ
ಕುಂದಾಪುರ: ಸಹನಾ ಅಕ್ವಾಟಿಕ್ ಮತ್ತು ಸ್ಪೋರ್ಟ್ಸ್ ಕ್ಲಬ್ ಅಂಕದಕಟ್ಟೆ,ಕೋಟೇಶ್ವರ ಮತ್ತು ಕಶ್ವಿ ಚೆಸ್ ಸ್ಕೂಲ್ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್, ಅಖಿಲ ಭಾರತ ಚೆಸ್ ಫೆಡರೇಶನ್ ಮತ್ತು ಅಂತರಾಷ್ಟ್ರೀಯ ಚೆಸ್ ಫೆಡರೇಶನ್ ನ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ (ಬಿಲೋ 2000)ಅಮೆಚೂರ್ ಫಿಡೆ ರೇಟೆಡ್ ಚೆಸ್ ಚಾಂಪಿಯನ್ ಶಿಪ್-2023 ಏಪ್ರಿಲ್ 21 ಶುಕ್ರವಾರದಂದು ಕೋಟೇಶ್ವರದ ಸಹನಾ ಆರ್ಕಿಡ್ ಹೋಟೆಲ್ ನಲ್ಲಿ ಆರಂಭಗೊಂಡಿತು. ಸರಳವಾಗಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ […]
ಕೋಟೇಶ್ವರ ಕೋಟಿಲಿಂಗೇಶ್ವರ ರಥೋತ್ಸವ ನಿಮಿತ್ತ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ
ಕುಂದಾಪುರ: ತಾಲೂಕಿನ ಕೋಟೇಶ್ವರ ಗ್ರಾಮದ ಮಹತೋಬಾರ ಶ್ರೀ ಕೋಟಿಲಿಂಗೇಶ್ವರರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 9 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕೋಟೇಶ್ವರ, ಹಂಗಳೂರು ಮತ್ತು ಗೋಪಾಡಿ ಗ್ರಾಮಗಳಲ್ಲಿ ಡಿ. 8 ರ ಬೆಳಗ್ಗೆ 6 ರಿಂದ ಡಿ. 9 ರ ರಾತ್ರಿ 12 ರವರೆಗೆ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಕೋಟೇಶ್ವರ: ನಿರುಪಯುಕ್ತ ನೀರಿನ ಟ್ಯಾಂಕ್ ತೆರವು
ಕುಂದಾಪುರ: ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಟ್ಯಾಂಕ್ ಅನ್ನು ತೆರವುಗೊಳಿಸುವ ಕಾರ್ಯಾಚರಣೆ ಮಂಗಳವಾರ ನಡೆಯಿತು. ಕೋಟೇಶ್ವರ ಗ್ರಾಪಂ ಎದುರಿನ ಗ್ರಾಮಲೆಕ್ಕಿಗರ ಕೊಠಡಿ ಹಿಂಭಾಗದಲ್ಲಿ 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯದ ಹೆಡ್‌ಟ್ಯಾಂಕ್‌ನಲ್ಲಿ ಸೋರಿಕೆ ಕಂಡುಬಂದಿದ್ದರಿಂದ ಕಳೆದ ಹದಿನೈದು ವರ್ಷಗಳಿಂದ ಯಾವುದೇ ಉಪಯೋಗ ಇಲ್ಲದೆ ನಿರುಪಯುಕ್ತವಾಗಿತ್ತು. ಟ್ಯಾಂಕ್ ಶಿಥಿಲಗೊಂಡಿದ್ದು ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಪಂ ಕಟ್ಟಡ ಸಹಿತ ಇತರೆ ಅಂಗಡಿಗಳಿಗೆ ಅಪಾಯ ಆಹ್ವಾನಿಸುತ್ತಿತ್ತು. ಟ್ಯಾಂಕ್ […]