ರಾಜ್ಯದಲ್ಲೇ ಪ್ರಥಮ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನೆ

ಉಡುಪಿ: ದೇಶದ ರಕ್ಷಣೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯವಾಗಿದ್ದು, ದೇಶಸೇವೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಪ್ರತಿ ಮನೆಯಿಂದಲೂ ಕನಿಷ್ಠ ಒಬ್ಬರಾದರೂ ಸೈನಿಕ ಸೇವೆಗೆ ಸೇರ್ಪಡೆಗೊಳ್ಳುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ಆಯೋಜಿಸಿದ್ದ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸರ್ಕಾರ ಯುವಜನರನ್ನು ರಕ್ಷಣಾ ಪಡೆಗಳಲ್ಲಿ […]

ಕೋಟಿ ಚೆನ್ನಯ್ಯ ಸೈನಿಕ ತರಬೇತಿ ಶಾಲೆಗೆ ಪ್ರಶಿಕ್ಷಣಾರ್ಥಿಗಳ ಆಯ್ಕೆ: ಸೆ.1 ರಂದು ರ‍್ಯಾಲಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೋಟಿ ಚೆನ್ನಯ್ಯ ಸೈನಿಕ ತರಬೇತಿ ಶಾಲೆಗೆ ಪ್ರಶಿಕ್ಷಣಾರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಸೆಪ್ಟಂಬರ್ 1 ರಂದು ಬೆಳಗ್ಗೆ 9 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ರ‍್ಯಾಲಿ ನಡೆಯಲಿದ್ದು, ಆಸಕ್ತ ಪುರುಷ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಹಾಗೂ ಆಧಾರ್ ಕಾರ್ಡ್ ಮೂಲ ಪ್ರತಿಯೊಂದಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.