ಮಣಿಪಾಲ: ಡಾ. ವಿ.ಎಸ್.ಆಚಾರ್ಯ ಪುತ್ಥಳಿ ಬಳಿ “ಕೋಟಿ ಕಂಠ ಗಾಯನ”
ಮಣಿಪಾಲ: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.28ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವಿನೂತನ ರೀತಿಯಲ್ಲಿ ಭಾಗವಹಿಸಲಿದೆ. ಅ.28 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿ ಬಳಿ ಇರುವ ಡಾ. ವಿ.ಎಸ್. ಆಚಾರ್ಯರವರ ಪುತ್ಥಳಿಯ ಬಳಿ ಸುಮಾರು 500 ಮಂದಿ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸೇರಿ ‘ಕನ್ನಡ ಶಾಲು ಮತ್ತು […]
ಅಕ್ಟೋಬರ್ 28 ರಂದು ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ
ಮಲ್ಪೆ: ಉಡುಪಿ ನಗರಸಭೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು ಮಲ್ಪೆಯ ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಅಂದು ಬೆಳಗ್ಗೆ 9 ಗಂಟೆಗೆ ಮಲ್ಪೆ ಸೀ-ವಾಕ್‌ನಲ್ಲಿ ಹಾಜರಿರಬೇಕು. ಸೀ-ವಾಕ್‌ನಿಂದ ಸೈಂಟ್ ಮೆರೀಸ್ ದ್ವೀಪಕ್ಕೆ ಉಚಿತ ಬೋಟಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.