ಜಿಲ್ಲೆಯಲ್ಲಿ ಕೋವಿಡ್-19 ಪರಿಷೃತ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ, ಜ.31: ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದಿದ್ದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಜನವರಿ 31 ರಿಂದ ಜಾರಿಗೆ ಬರುವಂತೆ ಪೆಬ್ರವರಿ 15 ರ ವರೆಗೆ ಈ ಕೆಳಗಿನಂತೆ ಮಾರ್ಗಸೂಚಿ/ನಿಬಂಧನೆಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. ಈಗಾಗಲೇ ಜಾರಿಯಲ್ಲಿರುವ ರಾತ್ರಿ ಕರ್ಫ್ಯೂ ಯನ್ನು […]