ಉಡುಪಿ ಶಾಸಕರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲೇ ಕೋವಿಡ್ ನಿಯಮ ಉಲ್ಲಂಘನೆ: ವ್ಯಾಪಕ ಟೀಕೆ
ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವಾಗಲೇ ಉಡುಪಿ ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೋವಿಡ್-19 ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿರುವ ಘಟನೆ ನಡೆದಿದೆ. ಹೌದು, ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಇಂದು ಕೆಮ್ಮಣ್ಣು ಗ್ರಾಪಂ ವ್ಯಾಪ್ತಿಯ ಪಡುತೋನ್ಸೆ ಯಾಳಕೆರೆ ಮನೆ ಬಳಿ 15 ಎಕರೆ ಹಡಿಲು ಕೃಷಿ ಭೂಮಿಯಲ್ಲಿ ನಾಟಿ ಕಾರ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ 200ಕ್ಕೂ ಅಧಿಕ ಮಂದಿ ಯಾವುದೇ ಸುರಕ್ಷಿತ ಅಂತರ ಕಾಪಾಡದೆ ಕೋವಿಡ್-19 ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅಲ್ಲದೆ, ಈ […]