ಕೋವಿಡ್ ಎರಡನೇ ಅಲೆ: ಸಭೆ, ಸಮಾರಂಭಕ್ಕೆ ನಿಷೇಧ.!
ಬೆಂಗಳೂರು: ಕೋವಿಡ್ ಎರಡನೇ ಅಲೆಯನ್ನು ತಡೆಯುವ ಉದ್ದೇಶದಿಂದ ಡಿಸೆಂಬರ್ 20ರಿಂದ ಜನವರಿ 2ರವರೆಗೆ ರಾಜ್ಯದಾದ್ಯಂತ ಎಲ್ಲ ರೀತಿಯ ಸಭೆ, ಸಮಾರಂಭಗಳಿಗೆ ನಿಷೇಧ ಹೇರುವಂತೆ ರಾಜ್ಯ ಮಟ್ಟದ ಕೋವಿಡ್ ನಿಯಂತ್ರಣ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಶುಕ್ರವಾರ ವಿಧಾನಸೌಧದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ಬಗ್ಗೆ ಮಾಹಿತಿ ನೀಡಿದರು. ಹೊಸ ವರ್ಷಾಚರಣೆ ಸೇರಿದಂತೆ ಎಲ್ಲ ಬಗೆಯ ಸಭೆ, ಸಮಾರಂಭ ನಿಷೇಧಕ್ಕೆ ಸಲಹಾ ಸಮಿತಿ ಶಿಫಾರಸು ಮಾಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿದ ಬಳಿಕ […]