ಉಡುಪಿ: ದಿನಕ್ಕೆ ಕನಿಷ್ಠ 10,000 ಕೋವಿಡ್ ಟೆಸ್ಟಿಂಗ್ ನಡೆಸಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಹರಡುವುದನ್ನು ನಿಯಂತ್ರಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಿ, ಸೋಂಕಿತರನ್ನು ಬೇಗ ಪತ್ತೆ ಹಚ್ಚುವುದು ಅಗತ್ಯವಿದ್ದು, ಇದಕ್ಕಾಗಿ ಪ್ರತಿ ದಿನ ಕನಿಷ್ಠ 10000 ರಿಂದ 12000 ಕೋವಿಡ್ ಪರೀಕ್ಷೆ ನಡೆಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇತ್ತೀಚೆಗೆ ಜಿಲ್ಲೆಗೆ ಭೇಟಿ ನೀಡಿದ ಮಾನ್ಯ ಮುಖ್ಯಮಂತ್ರಿಗಳ […]