ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡಲು ಸಂಪೂರ್ಣ ಸಿದ್ದತೆ: ಜಿಲ್ಲಾಧಿಕಾರಿ ಜಿ. ಜಗದೀಶ್
ಉಡುಪಿ: ಕೋವಿಡ್-19 ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಈ ಕುರಿತಂತೆ ಜಿಲ್ಲೆಯಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು. ಅವರು ಶುಕ್ರವಾರ ಉಡುಪಿಯ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಮೆಮೋರಿಯಲ್ ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಕೋವಿಡ್-19 ಲಸಿಕಾ ಡ್ರೈ ರನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಇದಕ್ಕಾಗಿ ಜಿಲ್ಲೆಯ 105 ಸರಕಾರಿ ಮತ್ತು 762 […]