6 ಅಥವಾ 8 ವಾರಗಳಲ್ಲಿ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದೆ: ತಜ್ಞರ ಎಚ್ಚರಿಕೆ
ನವದೆಹಲಿ: ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿದ್ದಂತೆ ದೇಶದಲ್ಲಿ ಈಗ ಮೂರನೇ ಅಲೆ ಭೀತಿ ಉಂಟಾಗಿದೆ. ದೇಶದಲ್ಲಿ ಮುಂದಿನ 6 ರಿಂದ 8 ವಾರಗಳಲ್ಲಿ ಕೊರೊನಾ 3ನೇ ಅಲೆ ಕಾಣಿಸಿಕೊಳ್ಳಲಿದೆ ಎಂದು ಏಮ್ಸ್ನ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಕೋವಿಡ್ ನಿಯಮಗಳನ್ನು ಪಾಲಿಸುವುದು ಕಣ್ಮರೆಯಾಗುತ್ತಿದೆ. ಮೊದಲ ಮತ್ತು ಎರಡನೇ ಅಲೆಯ ನಂತರವೂ ನಾವು ಪಾಠ ಕಲಿತಿಲ್ಲ. ಇಷ್ಟೆಲ್ಲ ಆದರೂ ಜನರು ಮತ್ತೆ ಗುಂಪು ಸೇರುತ್ತಿದ್ದಾರೆ. ಇದು ಮೂರನೇ […]