ವರಾಹರೂಪಂ ಹಾಡಿನ ಮೊದಲನೆ ತಡೆ ಪಾರು: ಹಾಡಿನ ಬಳಕೆಗೆ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಅನುಮತಿ

ತಿರುವನಂತಪುರ: ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಕಾನೂನಾತ್ಮಕ ಸಂಘರ್ಷದಲ್ಲಿ ನಿರ್ಮಾಪಕರಾದ ಹೊಂಬಾಳೆ ಫಿಲಂಮ್ಸ್ ನ ಮೊದಲನೆ ತಡೆ ಪಾರಾಗಿದ್ದು, ಹಾಡಿನ ಬಳಕೆಗೆ ಅನುಮತಿ ದೊರೆತಿದೆ. ವರಾಹರೂಪಂ ಹಾಡನ್ನು ತನ್ನ ನವರಸಂ ಹಾಡಿನಿಂದ ಕೃತಿಚೌರ್ಯ ಮಾಡಲಾಗಿದೆ ಎಂದು ಕೇರಳದ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಕೋರ್ಟಿನಲ್ಲಿ ದಾವೆ ಹೂಡಿದ್ದು ಇದನ್ನು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಈ ವಿಚಾರವಾಗಿ ಈ ಹಾಡಿನ ಬರಹಗಾರ ಶಶಿರಾಜ್ ಕಾವೂರು, “ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ […]