ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನಾಧಾರಿತ ಚಲನ ಚಿತ್ರ ತೆರೆಗೆ: ನಿರ್ಮಾಪಕರ ಜೊತೆ ಮಾತುಕತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕನ್ನಡ ಚಲನಚಿತ್ರವು ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್-ಮೇ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಮಾಜಿ ಶಾಸಕ ಶಿವರಾಜ್ ತಂಗಡಗಿ ಮತ್ತು ಶಾಸಕ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣವನ್ನು ಬಿಂಬಿಸುವ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ‘ಹೌದು ಹುಲಿಯಾ’ […]

ಹೆಜಮಾಡಿ ದುಬಾರಿ ಟೋಲ್ ದರ 40% ಕಮೀಷನ್ ನ ಮತ್ತೊಂದು ಉದಾಹರಣೆ: ವೆರೋನಿಕಾ ಕರ್ನೆಲಿಯೋ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಎಡೆಬಿಡದೆ ಹೋರಾಟ ನಡೆಸಿ ಸುರತ್ಕಲ್‌ ಟೋಲ್‌ಗೇಟ್‌ ಅನ್ನು ತೆರವುಗೊಳಿಸಿದರೂ ಈಗ ಅದನ್ನು ಹೆಜಮಾಡಿ ಟೋಲ್‌ ಪ್ಲಾಝಾ ಜತೆ ವಿಲೀನಗೊಳಿಸಿದ್ದಲ್ಲದೆ ದುಬಾರಿ ಟೋಲ್ ದರ ಇಟ್ಟಿರುವುದು ಸಂಸದ ನಳಿನ್ ಕುಮಾರ್ ಕಟೀಲ್ ಅವರ 40% ಕಮೀಷನ್ ಗೆ ಮತ್ತೊಂದು ಉದಾಹರಣೆಯಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಕಿಡಿ ಕಾರಿದ್ದಾರೆ. ಸಂಸದ ನಳಿನ್ ಕುಮಾರ್ ಇತ್ತೀಚೆಗೆ ಟ್ವೀಟ್ ಮಾಡಿ ಸುರತ್ಕಲ್ ಟೋಲ್ ರದ್ದು ಮಾಡಿದ್ದಕ್ಕಾಗಿ ಕೇಂದ್ರ ಭೂಸಾರಿಗೆ ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ ಆದರೆ […]

ಸುರತ್ಕಲ್ ಟೋಲ್ ಗೇಟ್ ವಿರುದ್ದದ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಜನತೆಯನ್ನು ಸುಲಿಗೆ ಮಾಡಿ ಹಗಲು ದರೋಡೆ ಮಾಡುತ್ತಿದೆ. ಈ ಟೋಲ್ ಗೇಟ್ ಅನಧಿಕೃತವೆಂದು ಸರಕಾರವೇ ಒಪ್ಪಿಕೊಂಡಿದ್ದರೂ, ಇನ್ನೂ ತೆರವು ಮಾಡದಿರುವುದು ಜಿಲ್ಲೆಯ ಜನತೆಗೆ ಬಗೆದ ದ್ರೋಹ. ಕಾರ್ಕಳದ ಜನರೂ ಇದರಿಂದ ಸಂತ್ರಸ್ತರಾಗಿದ್ದಾರೆ. ಆದ್ದರಿಂದ ಅಕ್ರಮವಾಗಿ ಸುಲಿಗೆ ಮಾಡುತ್ತಿರುವ ಸುರತ್ಕಲ್ ಟೋಲ್ ಗೇಟ್ ಕೂಡಲೇ ಬಂದ್ ಆಗಬೇಕು. ಟೋಲ್ ನ ವಿರುದ್ಧ ನಡೆಯುವ ಯಾವುದೇ ಹೋರಾಟಕ್ಕೂ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಸುರೇಂದ್ರ ಶೆಟ್ಟಿ ಹೇಳಿದರು. ಅವರು ಶನಿವಾರದಂದು ಸುರತ್ಕಲ್ […]

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಪಕ್ಕಾ: ಡಿಕೆ ಶಿವಕುಮಾರ್

ಬಳ್ಳಾರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಭಾನುವಾರ ಹೇಳಿದ್ದಾರೆ. ಯಾರ ಜೊತೆಗೂ ಮೈತ್ರಿ ಇಲ್ಲದೇ ಈ ಸಂಖ್ಯಾಬಲ ಸಾಧಿಸುತ್ತೇವೆ ಎಂದು ಅವರು ಹೇಳಿದ್ದಾರೆ. ರಾಜ್ಯ ವಿಧಾನಸಭೆಯು 224 ಸ್ಥಾನಗಳನ್ನು ಹೊಂದಿದ್ದು, ಬಹುಮತಕ್ಕೆ 150 ಸ್ಥಾನಗಳು ಬೇಕಾಗಿರುತ್ತದೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಭಾರತ್ ಜೋಡೋ ಯಾತ್ರೆಗೆ ಕರ್ನಾಟಕದಲ್ಲಿ ಭಾರೀ ಬೆಂಬಲ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ 150 ವಿಧಾನಸಭಾ […]

ಭಾರತ್ ಜೋಡೋ ಯಾತ್ರೆ: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ?

ಬೆಂಗಳೂರು: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ರಾಜ್ಯ ಮುಖ್ಯಸ್ಥ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯವು ರಾಜ್ಯ ಘಟಕದಲ್ಲಿನ ದೋಷಗಳನ್ನು ಮತ್ತೆ ಬಹಿರಂಗಪಡಿಸಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ಉದ್ದಗಲಕ್ಕೂ 22 ದಿನಗಳ ಕಾಲ ಸಂಚರಿಸಲಿದೆ. ಆದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಬಣಗಳು ಒಂದಾಗಲು ಹೆಣಗಾಡುತ್ತಿರುವಂತೆ ತೋರುತ್ತಿದೆ. ರಾಜ್ಯದಲ್ಲಿ ಯಾತ್ರೆಯನ್ನು […]