ದೀಪಾವಳಿ ಸೌಹಾರ್ದತೆಯ ಸಂದೇಶ ಸಾರುತ್ತದೆ: ಕೆ.ಪಿ. ಮಹಾಲಿಂಗು
ಉಡುಪಿ: ನಾವು ನಮ್ಮಲ್ಲಿರುವ ಸಂತೋಷವನ್ನು ಇತರರೊಂದಿಗೆ ಹಂಚಿಕೊಳ್ಳುವುದರ ಮೂಲಕ ಸೌಹಾರ್ದತೆಯನ್ನು ಕಾಣಬೇಕು. ದೀಪಾವಳಿ ಹಬ್ಬ ಕೂಡ ಇದೇ ಸಂದೇಶವನ್ನು ಸಾರುತ್ತದೆ ಎಂದು ಸಾಹಿತಿ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಡುಪಿ ವಲಯದ ಪ್ರಾದೇಶಿಕ ನಿರ್ದೇಶಕ ಕೆ.ಪಿ. ಮಹಾಲಿಂಗು ಹೇಳಿದರು. ಸೌಹಾರ್ದ ಸಮಿತಿ, ಕೆಥೊಲಿಕ್ ಸಭಾ ಉಡುಪಿ ಘಟಕ, ಶೋಕಮಾತಾ ಇಗರ್ಜಿ ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಸಂಗಮದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಶೋಕಮಾತಾ ಇಗರ್ಜಿಯ ವಠಾರದಲ್ಲಿ ಮಂಗಳವಾರ ಆಯೋಜಿಸಿದ ಸರ್ವ ಧರ್ಮ ದೀಪಾವಳಿ ಆಚರಣೆ ಕಾರ್ಯಕ್ರಮದಲ್ಲಿ […]