ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಮುನಿಯಾಲು: ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲು ಇದರ 2023- 24 ರ ಸಾಲಿನ ವಿದ್ಯಾರ್ಥಿ ಕ್ರೀಡಾ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನಾ ಸಮಾರಂಭ ಜೂನ್ 27 ರಂದು ನಡೆಯಿತು. ದೀಪ ‌ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕ ವಿ.ಸುನೀಲ್ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಂಸ್ಥೆಯ ಸಮಗ್ರ ಅಭಿವೃದ್ಧಿಗೆ ಸಕಲ ಸಹಕಾರದ ಭರವಸೆಯನ್ನು ನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಬೇಬಿ ಶೆಟ್ಟಿ.ಕೆ ಅತಿಥಿಗಳನ್ನು ಸ್ವಾಗತಿಸಿ […]

ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಿ: ಡಾ. ವಿಶಾಲ್

ಉಡುಪಿ: ಶಾಲಾ ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್, ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು. ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಅವರು ಸೋಮವಾರ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ […]

ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಅಭಿವೃದ್ಧಿಗೆ ಒಡಂಬಡಿಕೆ

ಉಡುಪಿ: ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡುವೆ ರಾಜ್ಯದಲ್ಲೇ ಮೊದಲ ಬಾರಿಗೆ ಒಡಂಬಡಿಕೆ ನಡೆಯಿತು. ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ […]