ನೆರೆ ಸಂತ್ರಸ್ತರಿಗೆ ಮನೆ ಪುನರ್ ನಿರ್ಮಾಣದ ಆದೇಶ ಪ್ರತಿ ಹಾಗೂ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ

ಉಡುಪಿ: ನೆರೆ ಪ್ರವಾಹದಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡ ಮತ್ತು ಭಾಗಶಃ ಹಾನಿಗೊಳಗಾದ ಸಂತ್ರಸ್ತರಿಗೆ ಪ್ರಾಕೃತಿಕ ವಿಕೋಪ ನಿಧಿಯಡಿ ಮನೆ ಪುನರ್ ನಿರ್ಮಾಣದ ಆದೇಶ ಪ್ರತಿ ಹಾಗೂ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ಅನ್ನು ಶಾಸಕ ಕೆ. ರಘುಪತಿ ಭಟ್ ಸೋಮವಾರ ಉಡುಪಿ ತಾ.ಪಂ. ಸಭಾಂಗಣದಲ್ಲಿ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಭಾಗ್ಯಲಕ್ಷ್ಮೀ ಯೋಜನೆಯ ಮೂಲಕ ಹೆಣ್ಣು ಮಗುವಿನ ಹೆಸರಿನಲ್ಲಿ 19,300 ರೂ. ಎಲ್‌ಐಸಿ ಪಾಲಿಸಿ ಮಾಡಿಸುತ್ತಿದ್ದು, ಮಗುವಿಗೆ 18 ವರ್ಷ ತುಂಬಿದ […]