ಶ್ರೀ ಕೃಷ್ಣ ಮಠದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮಾಡಿದರು. ಭೀಮನಕಟ್ಟೆ ಮಠಾಧೀಶರಾದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಯತಿಗಳಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಮ್ಮೇಳನದ ಅಧ್ಯಕ್ಷರುಗಳಾದ ರಾಮದಾಸ ಮಡಮಣ್ಣಾಯ,ಡಾ.ಬಾಲಕೃಷ್ಣ ಮೂಡಂಬಡಿತ್ತಾಯ, ಪ್ರಧಾನ ಸಂಚಾಲಕರಾದ ಎಂ.ಬಿ.ಪುರಾಣಿಕ್,ಕಾರ್ಯಾಧ್ಯಕ್ಷರಾದ ಮಂಜುನಾಥ ಉಪಾಧ್ಯಾಯ,ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊಳದವರು ಉಪಸ್ಥಿತರಿದ್ದರು.