ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ; ಪುತ್ತಿಗೆ ಶ್ರೀಗಳಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಸ್ವೀಕಾರ

ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ಇಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು. ಬಳಿಕ ಗೀತಾ ಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಕೋಟಿಗೀತಾ ಲೇಖನಯಜ್ಞ ದೀಕ್ಷೆ ಹಾಗೂ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಉಪಸ್ಥಿತರಿದ್ದರು.

ಕೃಷ್ಣಮಠದಲ್ಲಿ ನೆಲಭೋಜನ ಹರಕೆ ತೀರಿಸಿದ ಹರಿಪ್ರಿಯಾ ವಸಿಷ್ಠ ಸಿಂಹ ದಂಪತಿಗಳು

ಉಡುಪಿ: ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನಡೆಯುವ ನೆಲಭೋಜನ ಹರಕೆಯ ಸೇವೆಯನ್ನು ತೀರಿಸಲು ಗುರುವಾರ ಉಡುಪಿಗೆ ಆಗಮಿಸಿದ ಖ್ಯಾತ ನಟರಾದ ವಸಿಷ್ಠ ಸಿಂಹ, ಹರಿಪ್ರಿಯಾ ದಂಪತಿಗಳು ಕೃಷ್ಣದರ್ಶನ ಮಾಡಿದರು. ಈ ಸಂದರ್ಭದಲ್ಲಿ ಮಧೂರು ನಾರಾಯಣ ಶರಳಾಯ ಉಪಸ್ಥಿತರಿದ್ದರು.

ಮೋಹಿನಿ ಅಲಂಕಾರದಲ್ಲಿ ಮನಮೋಹನ ಕೃಷ್ಣ!!

ಉಡುಪಿ: ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣ ದೇವರಿಗೆ ‘ಮೋಹಿನಿ’ ವಿಶೇಷ ಅಲಂಕಾರವನ್ನು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಸ್ವಾಮೀಜಿಯವರು ನೆರವೇರಿಸಿ, ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.

ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣನಿಗೆ ರುಕ್ಮಿಣಿ ಅಲಂಕಾರ

ಉಡುಪಿ: ನವರಾತ್ರಿಯ ಪ್ರಯುಕ್ತ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಸ್ವಾಮೀಜಿಯವರು ಶ್ರೀಕೃಷ್ಣನಿಗೆ ‘ಉಯ್ಯಾಲೆಯಲ್ಲಿ ರುಗ್ಮಿಣೀ’ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಸ್ವಾಮೀಜಿ ಮಹಾಪೂಜೆ ನೆರವೇರಿಸಿದರು.

ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಸಮಾವೇಶ

ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ) ಮತ್ತು ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಶ್ರೀಕೃಷ್ಣಾಪುರ ಮಠ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಮತ್ತು ಸಮಾವೇಶವನ್ನು ಪರ್ಯಾಯ ಸ್ವಾಮೀಜಿಯವರ ಪರವಾಗಿ ಮಠದ ದಿವಾನರಾದ ವರದರಾಜ ಭಟ್ ಇವರು ಉದ್ಘಾಟಿಸಿದರು. ಸಮಾರಂಭದಲ್ಲಿ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, […]