ಶ್ರೀಕೃಷ್ಣ ಮಠದಲ್ಲಿ ಸೌರಯುಗಾದಿ ಉತ್ಸವ ಆಚರಣೆ

ಉಡುಪಿ: ಸೌರಯುಗಾದಿಯ ಪ್ರಯುಕ್ತ ಶುಕ್ರವಾರ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಮುಖ್ಯಪ್ರಾಣದೇವರ ಉತ್ಸವ ನಡೆಯಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ನಂತರ ಚಂದ್ರಶಾಲೆಯಲ್ಲಿ ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು. ಪರ್ಯಾಯ ಮಠದ […]

ಚಿತ್ರನಟ ಜೈ ಜಗದೀಶ್ ಕುಟುಂಬದಿಂದ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಚಲನಚಿತ್ರರಂಗದ ಹಿರಿಯ ನಟ ಜೈ ಜಗದೀಶ್ ಮತ್ತು ವಿಜಯಲಕ್ಷ್ಮಿಸಿಂಗ್ ಅವರು ಕುಟುಂಬ ಸಮೇತರಾಗಿ ಶ್ರೀಕೃಷ್ಣಮಠಕ್ಕಾಗಮಿಸಿ ಶ್ರೀಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮತ್ತು ನಾರಾಯಣ ಸರಳಾಯ ಉಪಸ್ಥಿತರಿದ್ದರು.

ಶ್ರೀಕೃಷ್ಣಮಠದಲ್ಲಿ ಸುಂದರಕಾಂಡ ಪ್ರವಚನ ಸಪ್ತಾಹ ಸಂಪನ್ನ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಶ್ರೀ ಹನುಮ ಜಯಂತಿ ಪ್ರಯುಕ್ತ ಸುಂದರಕಾಂಡ ಪ್ರವಚನ 6 ದಿನಗಳ ಕಾಲ ನಡೆಯಿತು. ಪ್ರವಚನ ನಡೆಸಿಕೊಟ್ಟ ವಿದ್ವಾನ್ ಶ್ರೀ ಬ್ರಹ್ಮಣ್ಯಾಚಾರ್ಯ ಇವರನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಗೌರವಿಸಿ ಅನುಗ್ರಹಸಿದರು. ಸಂಸ್ಥೆಯ ವತಿಯಿಂದ ಶ್ರೀಪಾದರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಪ್ರಾಯೋಜಕರಾದ ಕಿದಿಯೂರು ಹೋಟೆಲ್ ಮಾಲೀಕ ಭುವನೇಂದ್ರ ಕಿದಿಯೂರು, ಜಿತೇಶ್ ಕಿದಿಯೂರು , ಯುವರಾಜ್ ಮಾಸ್ಖತ್ , ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ಸಂತ ಮಂಥನದಲ್ಲಿ ಭಾಗಿಯಾದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಉಡುಪಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರು ಚುನಾವಣಾ ಪ್ರವಾಸ ನಿಮಿತ್ತ ಉಡುಪಿಗೆ ಆಗಮಿಸಿದ ಸಂದರ್ಭ ಶ್ರೀಕೃಷ್ಣ ದೇವರ ದರ್ಶನ ಪಡೆದು ಬಳಿಕ ಪೇಜಾವರ ಮಠದ ಸಭಾಂಗಣದಲ್ಲಿ “ಸಂತ ಮಂಥನ” ಎನ್ನುವ ಕಾರ್ಯಕ್ರಮದಲ್ಲಿ ಕರಾವಳಿ ಭಾಗದ ಅನೇಕ ಮಠಾಧೀಶರೊಂದಿಗೆ ಸಮಾಲೋಚನೆಯನ್ನು ನಡೆಸಿದರು. ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆದ ಈ ಸಮಾವೇಶದಲ್ಲಿ ಅನೇಕ ಮಠಾಧೀಶರು ಭಾಗವಹಿಸಿದ್ದರು. ಪೇಜಾವರ ಮಠದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್, ವಾಸುದೇವ ಭಟ್ ಪೆರಂಪಳ್ಳಿ, ವಿಷ್ಣುಮೂರ್ತಿ ಆಚಾರ್ಯ,ಕೃಷ್ಣ ಭಟ್,ಇಂದುಶೇಖರ ಹೆಗಡೆ ಮೊದಲಾದವರು ನಡ್ಡಾರವರನ್ನು ಗೌರವದಿಂದ […]