ದಿವ್ಯಾಂಗರ ಜೊತೆ ಕೈಜೋಡಿಸಿ ಮುಖ್ಯವಾಹಿನಿಗೆ ಕರೆತನ್ನಿ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ

ಉಡುಪಿ: ಡಿ 16 ಮತ್ತು 17 ರಂದು ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಿವ್ಯಾಂಗರ ಮಾಹಿತಿ ಕಾರ್ಯಗಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದ್ದು ಇದರ ಸಮಾರೋಪ ಕಾರ್ಯಕ್ರಮದ ಗೌರವ ಅಧ್ಯಕ್ಷತೆಯನ್ನು ಶ್ರೀಶ್ರೀ ವಿದ್ಯಾಸಾಗರ ತೀರ್ಥ ಶ್ರೀ ಪಾದರು ಶ್ರೀ ಪರ್ಯಾಯ ಶ್ರೀ ಕೃಷ್ಣಾಪುರ ವಹಿಸಿದ್ದು, ತಮ್ಮ ಅನುಗ್ರಹ ಭಾಷಣದಲ್ಲಿ ದಿವ್ಯಾಂಗರು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗುವಲ್ಲಿ ಸಮಾಜದ ಎಲ್ಲಾ ನಾಗರಿಕರು ತಮ್ಮ ಕೆಲಸ ನಿರ್ವಹಿಸುವುದರೊಂದಿಗೆ ದಿವ್ಯಾಂಗರ ಜೊತೆಗೂ ಕೈ ಜೋಡಿಸಿ ಶ್ರೀ ಕೃಷ್ಣ […]

ದಿವ್ಯಾಂಗರ ಸೇವೆ ದೇವರ ಸೇವೆಗೆ ಸಮಾನ: ವಿಜಯ್ ಕೊಡವೂರು

ಉಡುಪಿ: ಪರಮಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಶ್ರೀ ಕೃಷ್ಣಾಪುರ ಮಠ ಉಡುಪಿ ಇವರ ಆಶೀರ್ವಾದ ಹಾಗೂ ಸಹಕಾರದೊಂದಿಗೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಟ್ಟದ ಸಮಗ್ರ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಉಡುಪಿ ಜಿಲ್ಲೆ, ದಿವ್ಯಾಂಗರ ರಕ್ಷಣಾ ಸಮಿತಿ ಕೊಡವೂರು ಇವರ ಸಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ದಿವ್ಯಾಂಗರ ಬೃಹತ್ ಸಮಾವೇಶ ಪ್ರತಿಭಾ ಪ್ರದರ್ಶನ ಹಾಗೂ ದಿವ್ಯಾಂಗರ ಕರ ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ […]

ಕಿಶೋರ ಯಕ್ಷಗಾನ ಸಂಭ್ರಮ -2022 ಸಮಾರೋಪ ಸಮಾರಂಭ; ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ,ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಕಿಶೋರ ಯಕ್ಷಗಾನ ಸಂಭ್ರಮ -2022ರ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಿದ ಗುರುಗಳನ್ನು ಸನ್ಮಾನಿಸಿದರು. ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಹಿಂದಿನ ಅಶಿಕ್ಷಿತ ಜನತೆಗೆ ದೇವರ ಪರಿಚಯ ಮತ್ತು ಪುರಾಣಗಳ ಸಾರವನ್ನು ತಿಳಿಸಿದೆ. ಈಗಿನ ಪ್ರಜೆಗಳಿಗೆ ಅಧ್ಯಾತ್ಮದ ಬಗ್ಗೆ ತಿಳಿಯಲು ಇದು ಉತ್ತಮವಾದ […]

 ಪರ್ಯಾಯ ಪುತ್ತಿಗೆ ಮಠದ ಬಾಳೆ ಮುಹೂರ್ತ ಕಾರ್ಯಕ್ರಮ ಸಂಪನ್ನ

ಉಡುಪಿ: ಭಾವಿ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೂರ್ವ ಮುಹೂರ್ತಗಳಲ್ಲಿ ಮೊದಲನೆಯ ಕಾರ್ಯಕ್ರಮ ಬಾಳೆ ಮುಹೂರ್ತ ಶುಕ್ರವಾರ ಬೆಳಿಗ್ಗೆ 8.20ರ ಧನುರ್ನಗ್ನದಲ್ಲಿ ನಡೆಯಿತು. 2024ರ ಜ. 18ರಂದು ಸರ್ವಜ್ಞ ಪೀಠವೇರಿ ಚತುರ್ಥ ಬಾರಿಗೆ ದ್ವೈವಾರ್ಷಿಕ ಶ್ರೀಕೃಷ್ಣ ಪೂಜಾ ಕೈಂಕರ್ಯ ಸ್ವೀಕರಿಸಲಿರುವ ಭಾವಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪುತ್ತಿಗೆ ಮಠದ ನಿಗದಿತ ಸ್ಥಳದಲ್ಲಿ ಬಾಳೆ ಮತ್ತು ತುಳಸಿ ಸಸಿಗಳನ್ನು ನೆಡುವ ಮೂಲಕ ಸಾಂಪ್ರದಾಯಿಕ ಬಾಳೆ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಹೆರ್ಗ ವೇದವ್ಯಾಸ ಭಟ್, ಕೇಂಜ […]

ಶ್ರೀಕೃಷ್ಣಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ ಉತ್ಸವ

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯೊಂದಿಗೆ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವೈಭವದಿಂದ ವಾರ್ಷಿಕ ಉತ್ಸವ ನಡೆಯಿತು.