ರಾಜಾಂಗಣದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಕಾರ್ಯಕ್ರಮವನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಅನುಗ್ರಹಿಸಿದರು. ಶಾಸಕ ರಘುಪತಿ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಭ್ಯಾಗತರಾಗಿ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್, ಉಜ್ವಲ್ ಡೆವಲಪರ್ಸ್ ನ ಪುರುಷೋತ್ತಮ ಶೆಟ್ಟಿ, ಉಡುಪಿ ಕನ್ನಡ ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ […]

ಶ್ರೀಕೃಷ್ಣಮಠದಲ್ಲಿ ಶ್ರೀ ಶೋಭಕೃತ್ ನಾಮ ಸಂವತ್ಸರದ ತಿಥಿ ನಿರ್ಣಯ ಪಂಚಾಂಗ ಬಿಡುಗಡೆ

ಉಡುಪಿ: ಶ್ರೀಕೃಷ್ಣಮಠದ ಶ್ರೀಮನ್ಮಧ್ವಾಚಾರ್ಯರ ಸರ್ವಜ್ಞಪೀಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಭಾವೀ ಸಮೀರ ಶ್ರೀವಾದಿರಾಜ ಗುರುಸಾರ್ವಭೌಮರ ತಿಥಿ ನಿರ್ಣಯಾನುಸಾರ ತಿಥಿ ವೃದ್ಧಿ ಹ್ರಾಸ ನಿಯಮದಿಂದ ರಚಿತವಾದ ಬರುವ “ಶ್ರೀಶೋಭಕೃತ್” ನಾಮ ಸಂವತ್ಸರದ ತಿಥಿ ನಿರ್ಣಯ ಪಂಚಾಂಗವನ್ನು ಬಿಡುಗಡೆಗೊಳಿಸಿದರು.

ಶ್ರೀಕೃಷ್ಣಮಠದಲ್ಲಿ ಭಕ್ತ ಕನಕದಾಸರ ಪ್ರತಿಮೆಗೆ ಪುಷ್ಪಾಲಂಕಾರ, ಹರಿಕಥಾ ಕೀರ್ತನೆ

ಉಡುಪಿ: ರಥಬೀದಿಯಲ್ಲಿರುವ ಶ್ರೀಕೃಷ್ಣ ಮಠದ ಮುಂಭಾಗದ ಕನಕದಾಸರ ಪ್ರತಿಮೆ ಹಾಗೂ ಗುಡಿಗೆ ಕನಕದಾಸ ಜಯಂತಿ ಪ್ರಯುಕ್ತ ವಿಶೇಷ ಪುಷ್ಪಾಲಂಕಾರ ನಡೆಸಿ ಪೂಜಿಸಲಾಯಿತು. ಕನಕದಾಸ ಜಯಂತಿ ಪ್ರಯುಕ್ತ ಶ್ರೀಮತಿ ಶ್ರೀಲತಾ ಜಿ.ಭಟ್ ಹಾಗೂ ಕುಮಾರಿ ವಸುಂದರಾ ಭಟ್ ಇವರಿಂದ “ಭಕ್ತ ಕನಕದಾಸ” ಹರಿಕಥೆ ನಡೆಯಿತು.

ಕನಕದಾಸರ ರಚನೆಗಳು ಸಹಬಾಳ್ವೆಯ ಸಂದೇಶ ಸಾರುವ ದಾರಿದೀಪಗಳು: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

ಉಡುಪಿ: ಕನಕದಾಸರು ರಚಿಸಿರುವ ಕೃತಿಗಳು ಮತ್ತು ಅವರು ನೀಡಿರುವ ಸಂದೇಶಗಳು ಮಾನವ ಸಮಾಜದಲ್ಲಿ ಸಮಾನತೆ ಮೂಡಲು ಮತ್ತು ಸಹಬಾಳ್ವೆಯಿಂದ ಬಾಳಲು ಅಗತ್ಯವಿರುವ ಸಂದೇಶವನ್ನು ಸಾರುತ್ತವೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕಂತಿ ಇಲಾಖೆ ಸಹಯೋಗದಲ್ಲಿ ನಡೆದ ಭಕ್ತ ಕನಕದಾಸ ಮತ್ತು ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಯಾವುದೇ ಜಾತಿ, ಮತ, ಪಂಥ ಹಾಗೂ ಮೇಲು ಕೀಳುಗಳ […]

ರಾಧಾಕೃಷ್ಣ ನೃತ್ಯನಿಕೇತನ ವತಿಯಿಂದ ಭರತಮುನಿ ಜಯಂತ್ಯುತ್ಸವ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ರಾಧಾಕೃಷ್ಣ ನೃತ್ಯನಿಕೇತನ ಉಡುಪಿ ವತಿಯಿಂದ “ಭರತಮುನಿ ಜಯಂತ್ಯುತ್ಸವ” ವನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕನ್ನಡ ಉಪನ್ಯಾಸಕ ಮತ್ತು ಲೇಖಕ ರವಿಚಂದ್ರ ಬಾಯಾರಿ ಕೊಕ್ಕರ್ಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಭ್ಯಾಗತರಾಗಿ ಕಿರುತೆರೆ ಕಲಾವಿದರಾದ ಕಾರ್ತಿಕ್ ಸಾಮಗ ಭಾಗವಹಿಸಿದ್ದರು. ವಿದುಷಿ ಶುಭದಾ ಸುಧೀರ್, ವಿದುಷಿ ಡಾ.ಸುಪರ್ಣಾ ವೆಂಕಟೇಶ್, ವಿದುಷಿ ಡಾ.ಚೇತನ ಆಚಾರ್ಯ, ವಿದುಷಿ ಉಮಾಶಂಕರಿ,ವಿದುಷಿ ಜಗನ್ನಾಥ ಆಚಾರ್ಯ ಎಳ್ಳಂಪಳ್ಳಿ […]