ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ
ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಶ್ರೀಕೃಷ್ಣಜನ್ಮಾಷ್ಟಮಿ ಅಷ್ಟದಿನೋತ್ಸವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ನೆರವೇರಿಸಿ ಅನುಗ್ರಹಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಗೋಪಾಲಕೃಷ್ಣ ಉಪಾಧ್ಯಾಯ,ಪರ್ಯಾಯ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೂತನ ಪರಿಕಲ್ಪನೆ: ತ್ರಿವರ್ಣದ ಬೆಳಕಿನ ರಂಗಲ್ಲಿ ಮಿಂದೇಳಲಿದೆ ಕನಕ ಗೋಪುರ!!
ಉಡುಪಿ: ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಆಶ್ರಯದಲ್ಲಿ ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಥಮ ಬಾರಿಗೆ ಉಡುಪಿಯ ರಥಬೀದಿಯಲ್ಲಿರುವ ಕನಕ ಗೋಪುರವು “ತ್ರಿವರ್ಣ” ಬಣ್ಣದ ಬೆಳಕಿನೊಂದಿಗೆ ಝಗಮಗಗೊಳ್ಳಲಿದೆ. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜುಲೈ 13 ಶನಿವಾರದಂದು 6 ಗಂಟೆಗೆ ಕನಗೋಪುರದ ಎದುರು ಉದ್ಘಾಟನೆ […]
ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಗೆ ಗುರುವಂದನಾ ಕಾರ್ಯಕ್ರಮ
ಉಡುಪಿ: ಶ್ರೀ ಪೂರ್ಣಪ್ರಜ್ಞಾ ಆಡಿಟೋರಿಯಂನಲ್ಲಿ ಅದಮಾರು ಹಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಸನ್ಯಾಸದೀಕ್ಷಾ ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀ ಪಾದರಿಗೆ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಗುರುವಂದನಾ ಕಾರ್ಯಕ್ರಮವನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗಣ್ಯರು ನೆರೆದಿದ್ದರು.
ಶ್ರೀಕೃಷ್ಣ ಮಠ: ಶ್ರೀಮತಿ ಭಟ್ ರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ
ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಧುರ ಧ್ವನಿ ಚಾರಿಟೇಬಲ್ ಟ್ರಸ್ಟ್(ರಿ) ನ ಶ್ರೀಮತಿ ಭಟ್ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಿತು. ವಯೊಲಿನ್ ನಲ್ಲಿ ಶರ್ಮಿಳಾ ರಾವ್ ಮತ್ತು ತಬಲಾದಲ್ಲಿ ಬಾಲಚಂದ್ರ ಭಾಗವತ್ ಸಹಕರಿಸಿದರು.
ಉಡುಪಿ: ತಾಳಮದ್ದಳೆ ಸಪ್ತಾಹ ಕಾರ್ಯಕ್ರಮ ಸಮಾರೋಪ ಸಮಾರಂಭ
ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಯಕ್ಷಗಾನ ಕಲಾರಂಗ (ರಿ) ಉಡುಪಿ ಇವರ ಸಂಯೋಜನೆಯಲ್ಲಿ ನಡೆಯುತ್ತಿರುವ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ಭಾನುವಾರದಂದು ನಡೆಯಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,’ಮಟ್ಟಿ ಮುರಳೀಧರ ರಾವ್’ ಪ್ರಶಸ್ತಿಯನ್ನು, ಹಿರಿಯ ಅರ್ಥಧಾರಿಗಳಾದ ಎಸ್.ಎಂ.ಹೆಗಡೆ ಮುಡಾರೆ ಇವರಿಗೆ ಮರಣೋತ್ತರವಾಗಿ ನೀಡಿದ ಪ್ರಶಸ್ತಿಯನ್ನು ಅವರ ಪುತ್ರಿ ಸ್ವೀಕರಿಸಿದರು. ‘ಪೆರ್ಲ ಕೃಷ್ಣ ಭಟ್’ಪ್ರಶಸ್ತಿಯನ್ನು ಜಾನಪದ ವಿದ್ವಾಂಸ ,ಅರ್ಥಧಾರಿಗಳಾದ ಕೆ.ಎಲ್.ಕುಂಡಂತಾಯ ಇವರಿಗೆ ನೀಡಲಾಯಿತು. ಉಡುಪಿಯ ಮೂಲದ ಯಕ್ಷಗಾನ ಕಲೆ, ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ […]