ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ಉದ್ಘಾಟಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಉಡುಪಿ: ಇಲ್ಲಿನ ಪೇಜಾವರ ಮಠದ ಅಂಗಸಂಸ್ಥೆಯಾದ ಕುಕ್ಕಿಕಟ್ಟೆಯ ಶ್ರೀಕೃಷ್ಣ ಬಾಲನಿಕೇತನದಲ್ಲಿ, ಶ್ರೀಕೃಷ್ಣ ಸೇವಾಧಾಮ ಟ್ರಸ್ಟ್ ಅನ್ನು ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು. ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿತರಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕೆರಂದ್ಲಾಜೆ,ಉಡುಪಿ ಶಾಸಕರಾದ ಕೆ.ರಘುಪತಿ ಭಟ್,ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಉಮೇಶ್ ಕತ್ತಿ
ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್ ಹಾಗೂ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ವಿಶ್ವೇಶತೀರ್ಥ ಸ್ಮರಣಾರ್ಥ ಸ್ಮೃತಿ ವನ: ಮೇ 7 ರಂದು ಭೂಮಿ ಪೂಜೆ
ಉಡುಪಿ:ಶ್ರೀ ಪೇಜಾವರ ಮಠದ ಪದ್ಮವಿಭೂಷಣ ಪುರಸ್ಕೃತ ಕೀರ್ತಿಶೇಷ ಶ್ರೀ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಸ್ಮರಣಾರ್ಥ ಉಡುಪಿ ಜಿಲ್ಲೆಯ ನೀಲಾವರ ಗ್ರಾಮದಲ್ಲಿ (ಗೋಶಾಲೆ ಸಮೀಪ ) ನಿರ್ಮಾಣವಾಗಲಿರುವ ಸ್ಮೃತಿ ವನಕ್ಕೆ ಭೂಮಿ ಪೂಜಾ ಕಾರ್ಯಕ್ರಮವು ಇದೇ ಬರುವ ಮೇ 7 ನೇ ತಾರೀಖು ಶನಿವಾರ ಮುಂಜಾನೆ 9.30 ಕ್ಕೆ ನಡೆಯಲಿದೆ. ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ಸಮಾರಂಭ ನಡೆಯಲಿದ್ದು ರಾಜ್ಯದ ಅರಣ್ಯ ಮಂತ್ರಿ ಶ್ರೀ ಉಮೇಶ ವಿ ಕತ್ತಿಯವರು ಮುಖ್ಯ ಅಭ್ಯಾಗತರಾಗಿ […]
ರಾಜ್ಯ ಮಟ್ಟದ ಭಜನಾ ಕಮ್ಮಟ – ಗುರುವಂದನಾ ಕಾರ್ಯಕ್ರಮ
ಉಡುಪಿ: ಪರ್ಯಾಯ ಶ್ರೀ ಕ್ರಷ್ಣಾಪುರ ಮಠ ಉಡುಪಿ ಇದರ ಆಶ್ರಯದಲ್ಲಿ, ಶ್ರೀಮತಿ ಮೋಹಿನಿ ಭಟ್ ಮಂಜೇಶ್ವರ ಮತ್ತು ಶ್ರೀಮತಿ ಮಾಯಾ ಕಾಮತ್ ಈಶ್ವರ ನಗರ ಮಣಿಪಾಲ, ಶ್ರೀ ಮಹಾಮಾಯಾ ಭಜನಾ ಮಂಡಳಿ ಈಶ್ವರನಗರ ಮಣಿಪಾಲ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು, ಅಲೆವೂರು ಪರಿವರ್ತನಾ ಫೌಂಡೇಶನ್(ರಿ) ಮಣಿಪಾಲ ಇದರ ಸಹಯೋಗದೊಂದಿಗೆ ಆದಿತ್ಯವಾರದಂದು ಶ್ರೀಕೃಷ್ಣಮಠ ಆವರಣದ ರಾಜಾಂಗಣ ಜನಾರ್ದನತೀರ್ಥ ವೇದಿಕೆಯಲ್ಲಿ ರಾಜ್ಯ ಮಟ್ಟದ ಭಜನಾ ಕಮ್ಮಟವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮವನ್ನು ದಿವಾನರಾದ ವರದರಾಜ್ ಭಟ್ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ […]
ಶ್ರೀಕೃಷ್ಣಮಠದಲ್ಲಿ ಸಂಗೀತ ಕಾರ್ಯಕ್ರಮ
ಉಡುಪಿ: ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ, ವಿದುಷಿ ವೈಷ್ಣವಿ ಆನಂದ್ ಸಿಂಗಾಪುರ್ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.