ಶ್ರೀ ಕೃಷ್ಣ ಮಠ: ‘ನರಸಿಂಹ ವೈಭವ’ ಹರಿಕಥೆ

ಕಾರ್ಕಳ: ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಹರಿಕಥಾ ಪರಿಷತ್ತು ಮಂಗಳೂರು,ಅಖಿಲ ಕರ್ನಾಟಕ ಕೀರ್ತನ ಕಲಾ ಪರಿಷತ್ತು ಬೆಂಗಳೂರು ಮತ್ತು ಶ್ರೀಹಂಡೆದಾಸ ಪ್ರತಿಷ್ಟಾನ ಕಾರ್ಕಳ ಇವರ ಸಂಯುಕ್ತ ಸಹಯೋಗದೊಂದಿಗೆ ಬೆಂಗಳೂರಿನ ಕು.ಶಾರ್ವರೀ ಸೋಮಯಾಜಿ  ಇವರಿಂದ ‘ನರಸಿಂಹ ವೈಭವ’  ಕಥಾಭಾಗದ ಹರಿಕಥೆ ನಡೆಯಿತು.

ಕೃಷ್ಣಮಠ: ವೈಭವದ ಶೋಭಾಯಾತ್ರೆ

ಉಡುಪಿ:ಕೃಷ್ಣಮಠದ ಗರ್ಭಗುಡಿಗೆ ಸುವರ್ಣಗೋಪುರ ಸಮರ್ಪಿಸುವ ಹಿನ್ನೆಲೆಯಲ್ಲಿ ನಗರದಜೋಡುಕಟ್ಟೆಯಿಂದ ಕೃಷ್ಣಮಠದವರೆಗೆ ಶನಿವಾರ ವೈಭವದ ಶೋಭಾಯಾತ್ರೆ ನಡೆಯಿತು.ಜಿಲ್ಲೆಯ ವಿವಿಧ ಭಜನಾ ಮಂಡಳಿಯ ತಂಡಗಳು, ಜಾನಪದ ತಂಡಗಳು, ಸಾಂಸ್ಕೃತಿಕ ಕಲಾ ತಂಡಗಳು, ಟ್ಯಾಬ್ಲೊ ಮೆರವಣಿಗೆಗೆ ಚಂಡೆ, ಡೋಲು ವಾದನ ಹಾಗೂಸ್ಥಳೀಯ ಸಾಂಸ್ಕೃತಿಕ ತಂಡಗಳ ಜಾನಪದ ನೃತ್ಯ ಗಮನ ಸೆಳೆಯಿತು. ವಿಶ್ವೇಶತೀರ್ಥ ಸ್ವಾಮೀಜಿ ಶುಭ ಹಾರೈಸಿದರು.ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಕೆ. ರಘುಪತಿ ಭಟ್‌, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆನಳಿನಿ ಪ್ರದೀಪ್‌ ರಾವ್‌, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,ಬಿಜೆಪಿ ಮುಖಂಡರಾದ ಉದಯಕುಮಾರ್‌ ಶೆಟ್ಟಿ, ಯಶ್‌ಪಾಲ್‌ […]