ಉಡುಪಿ: ಶ್ರೀಶ ಭಟ್ ಕಡೆಕಾರ್ ಅವರಿಗೆ ಸನ್ಮಾನ
ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಸಮರ್ಪಣಾಗೋಪುರಮ್ ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು,ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಶ್ರೀ ವಿದ್ಯಾ ಧೀಶತೀರ್ಥ ಶ್ರೀಪಾದರು ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಇವರನ್ನು ಸನ್ಮಾನಿಸಿ ಅನುಗ್ರಹಿಸಿದರು.