ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ಗೆಲುವೇ ನನ್ನ ಗುರಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಶಾಸಕನಾಗಿ ನನ್ನ ಅಭಿಮಾನಿಗಳ ಸೇವೆ ಮಾಡಬೇಕೆಂಬುದು ನನ್ನ ಜೀವನದ ಬಹಳ ದೊಡ್ಡ ಆಸೆ. ಆದರೆ ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದವರನ್ನು ಬಿಟ್ಟು ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಲಾಗಿದೆ. ಆದುದರಿಂದ ನಾನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನನಗೆ ಎಲ್ಲರ ಸಹಕಾರ ಬೇಕು. ನಾನು ಗೆಲುವು ಸಾಧಿಸಿಯೇ ಸಿದ್ಧ. ಅಭಿಮಾನಿಗಳ ಸಹಕಾರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಪಕ್ಷವೇ ದೊಡ್ಡದು. […]