ಉಡುಪಿ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ.!
ಉಡುಪಿ: ಉಡುಪಿ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರ ನೇಮಕದ ಬೆನ್ನಲ್ಲೇ ಉಡುಪಿ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಳೆದೊಂದು ವರ್ಷದಿಂದ ಪಕ್ಷದೊಳಗೆ ನಡೆಯುತ್ತಿದ್ದ ಬ್ಲಾಕ್ ಅಧ್ಯಕ್ಷರ ಆಯ್ಕೆ ಬಿಕ್ಕಟ್ಟು ಕಡೆಗೂ ಶಮನವಾಗಿದೆ. ಆದರೆ ಇದು ಮತ್ತೊಂದು ಬಂಡಾಯಕ್ಕೆ ಕಾರಣವಾಗಿದೆ. ನೂತನ ಬ್ಲಾಕ್ ಅಧ್ಯಕ್ಷರನ್ನಾಗಿ ರಮೇಶ್ ಕಾಂಚನ್ ಅವರನ್ನು ನೇಮಕಗೊಳಿಸಿ ಹೆಸರು ಘೋಷಣೆ ಆಗುತ್ತಿದ್ದಂತೆ, ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಸಮಾಜಸೇವಕ ಕೆ. ಕೃಷ್ಣಮೂರ್ತಿ ಆಚಾರ್ಯ ಅವರ ಬೆಂಬಲಿಗರು ಪಕ್ಷದ ವಿರುದ್ಧ ಸಿಡಿದೆದ್ದಿದ್ದಾರೆ. ಕೃಷ್ಣಮೂರ್ತಿ […]