ಜ. 4ರಂದು ಜಿಲ್ಲಾ ಕೃಷಿಕ ಸಂಘದ ವತಿಯಿಂದ ಪ್ರತಿಭಟನೆ

ಉಡುಪಿ: ಜಿಲ್ಲೆಯ ಕೃಷಿಕರು ಎದುರಿಸುತ್ತಿರುವ ಸಂಕಷ್ಟ, ಸಮಸ್ಯೆಗಳ ಬಗ್ಗೆ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ವಿಳಂಬ ಧೋರಣೆಯ ವಿರುದ್ಧ ಉಡುಪಿ ಜಿಲ್ಲಾ ಕೃಷಿಕ ಸಂಘದ ವತಿಯಿಂದ ಜ. 4ರಂದು ಬೆಳಿಗ್ಗೆ 11ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಹಕಾರಿ ಸಂಘ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದಿರುವ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು. ಕಾಡು ಪ್ರಾಣಿಗಳ […]