ಸಾವಯುವ ಕೃಷಿ, ದೃಢೀಕರಣ ಯೋಜನೆ
ಉಡುಪಿ, ಜೂನ್ 15: ಸಾವಯವ ಕೃಷಿ ಪ್ರಮಾಣೀಕೃತ ಪ್ರದೇಶವನ್ನು ಹೆಚ್ಚಿಸುವುದರೊಂದಿಗೆ ಮಾರುಕಟ್ಟೆಗೆ ನಿರಂತರವಾಗಿ ಒಳ್ಳೆಯ ಗುಣಮಟ್ಟದ ಸಾವಯವ ಕೃಷಿ ಉತ್ಪನ್ನಗಳನ್ನು ಪೂರೈಕೆ ಮಾಡಲು ಸಾವಯವ ಕೃಷಿ ಮತ್ತು ದೃಢೀಕರಣ ಯೋಜನೆಯನ್ನು ಕರ್ನಾಟಕ ರಾಜ್ಯ ಸಾವಯವ ಪ್ರಮಾಣನ ಸಂಸ್ಥೆಯ ಮೂಲಕ ಅನುಷ್ಠಾನಗೊಳಿಸಲು ಯೋಜಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಕ್ಷೇತ್ರವನ್ನು ಸಾವಯವ ಪ್ರಮಾಣೀಕರಣಕ್ಕೆ ಈಗಾಗಲೇ ಪ್ರಥಮ ವರ್ಷಕ್ಕೆ ನೋಂದಾಯಿಸಲಾಗಿರುವ ಮತ್ತು ನೋಂದಾಯಿಸಲು ಆಸಕ್ತಿ ಇರುವ ಅರ್ಹ ನೋಂದಾಯಿತ ಸಂಘ ಸಂಸ್ಥೆಗಳು, ಕೃಷಿಕರ ಸಂಘಗಳು, ಖಾಸಗಿ ಸಂಸ್ಥೆಗಳು, ರೈತ ಉತ್ಪಾದನಾ […]
ಕೃಷಿ ಮಾಡುವ ಮೊದಲು ಸಂಪೂರ್ಣ ಮಾಹಿತಿ ಅಗತ್ಯ: ತಾ.ಪಂ. ಅಧ್ಯಕ್ಷೆ

ಉಡುಪಿ:ರೈತರು ಯಾವುದೇ ಕೃಷಿ ಮಾಡಲು ಮೊದಲು ಆ ಕೃಷಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತಮ್ಮ ಕೃಷಿಯಲ್ಲಿ ಅಳವಡಿಸಿಕೊಂಡಾಗ ಕೃಷಿಯಲ್ಲಿ ಉತ್ತಮ ಇಳುವರಿ ಪಡೆದು ರೈತರ ಸ್ವಯಂ ಅಭಿವೃದ್ಧಿ ಜೊತೆಗೆ ದೇಶದ ಅಭಿವೃದ್ಧಿ ಸಾಧ್ಯ ಎಂದು ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್‍ರಾವ್ ತಿಳಿಸಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಕೃಷಿ ಸಂಘ ಪೆರಂಪಳ್ಳಿ ಹಾಗೂ ಕೆಥೋಲಿಕ್ ಸಭಾ ಪೆರಂಪಳ್ಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಪೆರಂಪಳ್ಳಿ ಚರ್ಚ್ ಸಭಾಭವನದಲ್ಲಿ ನಡೆದ […]
ಬ್ರಹ್ಮಾವರ: ಕೃಷಿ ಅಭಿಯಾನ ಕಾರ್ಯಕ್ರಮ
ಉಡುಪಿ, ಜೂನ್ 1: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದಡಿಯಲ್ಲಿ ಜೂನ್ 12 ರಂದು ಬೆಳಗ್ಗೆ 10.30 ಕ್ಕೆ ಕೊಕ್ಕರ್ಣೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದು, ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.