ಹಲವು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸಾರಿಗೆ ನೌಕರರಿಂದ ಉಪವಾಸ ಸತ್ಯಾಗ್ರಹ
ಬೆಂಗಳೂರು: ಇಲ್ಲಿನ ಫ್ರೀಡಂಪಾರ್ಕ್‌ನಲ್ಲಿ ಸಾರಿಗೆ ನೌಕರರು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದ್ದು, ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಹೊಸ ಒಪ್ಪಂದದ ಪ್ರಕಾರ ಜನವರಿ 1 ರಿಂದ ಸಾರಿಗೆ ನೌಕರರ ವೇತನ ಪರಿಷ್ಕರಣೆ ಆಗಬೇಕು. ಆದರೆ, ವೇತನ ಸುಧಾರಣೆಯ ಪ್ರಶ್ನೆಯನ್ನು ಸಾರಿಗೆ ಸಂಸ್ಥೆಗಳು ಇನ್ನೂ ಚರ್ಚಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ನಾನಾ […]
ಇಂದಿನಿಂದ ರಸ್ತೆಗಳಲ್ಲಿ ಓಡಾಡಲಿದೆ ಕ.ರಾ. ರ.ಸಾ.ಸಂಸ್ಥೆಯ ಅಶ್ವಮೇಧ ಕ್ಲಾಸಿಕ್ ಹೈ ಟೆಕ್ ಬಸ್ಸುಗಳು
ಬೆಂಗಳೂರು: ಇಂದಿನಿಂದ ರಾಜ್ಯದ ರಸ್ತೆಗಳಲ್ಲಿ ನೂತನ 100 ಅಶ್ವಮೇಧ ಕ್ಲಾಸಿಕ್ (Ashvamedha Classic) ಬಸ್‌ಗಳು ಕಾರ್ಯಾರಂಭ ಮಾಡಲಿದ್ದು, ಬೆಂಗಳೂರಿನ ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ಬಸ್‌ಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಅಶ್ವಮೇಧ ಬಸ್‌ಗಳು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ. ಒಟ್ಟು 800 ಬಸ್‌ಗಳ ಪೈಕಿ ಇಂದು 100 ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮುಂದಿನ ಹಂತದಲ್ಲಿ ಇನ್ನುಳಿದ ಬಸ್‌ಗಳು ಸೇರ್ಪಡೆಗೊಳ್ಳಲಿವೆ. […]
‘ಕೆಎಸ್‌ಆರ್‌ಟಿಸಿ’ ಬಳಕೆಗೆ ಸಂಬಂಧಿಸಿದಂತೆ ಕೇರಳ ವಿರುದ್ಧದ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ
ಚನ್ನೈ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ‘ಕೆಎಸ್‌ಆರ್‌ಟಿಸಿ’ ಹೆಸರು ಬಳಸಲು ಯಾವುದೇ ಕಾನೂನು ನಿಷೇಧವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. KSRTC ಯ ವಿಶೇಷ ಬಳಕೆಗಾಗಿ ಕೇರಳ RTC ಹಕ್ಕನ್ನು ನ್ಯಾಯಾಲಯ ವಜಾಗೊಳಿಸಿದೆ. ಎರಡೂ ರಾಜ್ಯ ಸಾರಿಗೆ ನಿಗಮಗಳು ದಶಕಗಳಿಂದ ಸಂಕ್ಷಿಪ್ತ ರೂಪವನ್ನು ಬಳಸುತ್ತಿವೆ. ಕರ್ನಾಟಕ SRTC ಸಂಕ್ಷಿಪ್ತ ರೂಪ ಮತ್ತು ಅದರ ಲೋಗೋವನ್ನು ಪೇಟೆಂಟ್‌ಗಳು, ವಿನ್ಯಾಸಗಳು ಮತ್ತು ಟ್ರೇಡ್‌ಮಾರ್ಕ್‌ಗಳ ನಿಯಂತ್ರಕ ಜನರಲ್‌ನಲ್ಲಿ ನೋಂದಾಯಿಸಿದೆ. ಸಂಸ್ಥೆಯು ‘KSRTC’ ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು […]
ಬಸ್ಸು ನಿಲ್ದಾಣಗಳೆದುರು ಬಸ್ಸುಗಳನ್ನು ನಿಲ್ಲಿಸಲು ಆರ್.ಟಿ.ಒ ಸೂಚನೆ
ಉಡುಪಿ: ಜಿಲ್ಲೆಯಲ್ಲಿ ಸಂಚರಿಸುವ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಮುಖ್ಯವಾಗಿ ಎಂ.ಜಿ.ಎಂ ಕಾಲೇಜು ಮತ್ತು ಸಂತೆಕಟ್ಟೆ ಬಸ್ಸು ನಿಲ್ದಾಣಗಳಲ್ಲಿ ಬಸ್ಸುಗಳನ್ನು ನಿಲುಗಡೆ ಮಾಡದೇ ಬಸ್ಸು ನಿಲ್ದಾಣದ ಹಿಂದೆ ಅಥವಾ ಮುಂದೆ ನಿಲುಗಡೆ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದಿರುತ್ತವೆ. ಆದ್ದರಿಂದ ಜಿಲ್ಲೆಯಲ್ಲಿ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಕಡ್ಡಾಯವಾಗಿ ಬಸ್ಸು ನಿಲ್ದಾಣಗಳಲ್ಲಿಯೇ ಬಸ್ಸುಗಳನ್ನು ನಿಲುಗಡೆ ಮಾಡಲು ಎಲ್ಲಾ ಬಸ್ಸುಗಳ ಮಾಲೀಕರು ಕ್ರಮವಹಿಸಬೇಕು. ತಪ್ಪಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ […]