ಕೆ.ಎಸ್.ಆರ್.ಟಿ ಸಿ ‘ಮಂಗಳೂರು ದಸರಾ ದರ್ಶನ’ಕ್ಕೆ ಭರ್ಜರಿ ಬೇಡಿಕೆ: ಟೂರು ಪ್ಯಾಕೇಜ್ ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ

ಮಂಗಳೂರು: ಕೆ.ಎಸ್.ಆರ್.ಟಿ ಸಿ ಮಂಗಳೂರು ವಿಭಾಗದ ‘ಮಂಗಳೂರು ದಸರಾ ದರ್ಶನ’ಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಸಂಸ್ಥೆಯ ಹಿರಿಯ ವಿಭಾಗಾಧಿಕಾರಿ ರಾಜೇಶ್ ಶೆಟ್ಟಿ ಹೇಳಿದ್ದಾರೆ. ಮಂಗಳೂರು ದಸರಾ ದರ್ಶನಕ್ಕೆಂದೆ ಒಂಬತ್ತು ಬಸ್ ಗಳನ್ನು ಮೀಸಲಿರಿಸಲಾಗಿದ್ದು, ಕಳೆದ ವರ್ಷದಂತೆ ಈ ವರ್ಷವೂ ಸಾರ್ವಜನಿಕರಿಂದ ಟಿಕೆಟ್ ಗಾಗಿ ಬೇಡಿಕೆ ಬಂದಿದೆ. ಪ್ರಸ್ತುತ 6-7 ಬಸ್ ಗಳು ಓಡಾಡುತ್ತಿದ್ದು, ವಾರಾಂತ್ಯ ಮತ್ತು ಅ.21 ರ ಬಳಿಕ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ಕೊಲ್ಲೂರು ಮತ್ತು ನಗರ […]

ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್

ಮಂಡ್ಯ: ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಜಗದೀಶ್ ಎಂಬುವರು ಬಸ್ ಡಿಪೋ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಂದ ವರ್ಗಾವಣೆ ಸೂಚನೆ ಪಡೆದಿದ್ದ ಜಗದೀಶ್, ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಸಚಿವರೇ ಹೊಣೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ನಾಗಮಂಗಲದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದ್ದು, ಗುರುವಾರ ಜಗದೀಶ್ ಅವರ ವರ್ಗಾವಣೆ ಆದೇಶವನ್ನು ನೀಡಲು ಸಾರಿಗೆ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ತಮ್ಮ ವರ್ಗಾವಣೆಗೆ ಸಚಿವರು ಆದೇಶ […]

ರಾಜ್ಯ ಸಾರಿಗೆ ಬಸ್ ನಲ್ಲಿ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ರಿಯಾಯಿತಿ ದರದ ವಿದ್ಯಾರ್ಥಿ ಬಸ್‌ಪಾಸ್ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in. ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಸಹ ರೂ.30 ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, […]

ಉಡುಪಿಯಲ್ಲಿ ಹೆಚ್ಚಿನ ನರ್ಮ ಬಸ್ ಗಳನ್ನು ಓಡಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಬ್ಲಾಕ್ ಕಾಂಗ್ರೆಸ್ ಸಮಿತಿ

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು “ಶಕ್ತಿ ಯೋಜನೆ” ಉಚಿತ ಬಸ್ ಪ್ರಯಾಣವನ್ನು ಜಿಲ್ಲೆಯಲ್ಲಿ ಉದ್ಘಾಟಿಸಿದ ಬಳಿಕ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಉಡುಪಿ ಜಿಲ್ಲೆಯಾದ್ಯಂತ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನರ್ಮ್ ಬಸ್‌ಗಳನ್ನು ಪುನರಾರಂಭಿಸಿ ಹೆಚ್ಚಿನ ಬಸ್‌ಗಳನ್ನು ಒದಗಿಸುವ ಬಗ್ಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುತ್ತಿರುವುದರಿಂದ ಜಿಲ್ಲೆಯ ಮಹಿಳೆಯರು […]

ಕಡಬ: ಕೆಎಸ್‌ಆರ್‌ಟಿಸಿ ಬಸ್ ಮೇಲೆ ಕಾಡಾನೆ ದಾಳಿ; ಪ್ರಯಾಣಿಕರು ಅಪಾಯದಿಂದ ಪಾರು

ಕಡಬ: ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಆಣಿಲ ಎಂಬಲ್ಲಿ ಗುರುವಾರ ತಡರಾತ್ರಿ ಕಾಡಾನೆಯೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ದಾಳಿ ಮಾಡಿ ವಾಹನಕ್ಕೆ ಹಾನಿ ಮಾಡಿರುವ ಘಟನೆ ವರದಿಯಾಗಿದೆ. ಮಾಹಿತಿಗಳ ಪ್ರಕಾರ ಘಟನೆ ಜೂನ್ 1 ರಂದು ತಡರಾತ್ರಿ ನಡೆದಿದೆ. ಕೆಎಸ್‌ಆರ್‌ಟಿಸಿ ಸ್ಲೀಪರ್ ಬಸ್ ಪುತ್ತೂರು, ಸುಬ್ರಹ್ಮಣ್ಯ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ. ಆಣಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡ ಬಸ್ ಚಾಲಕ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರೂ, ಆನೆ ಬಸ್ಸಿನ ಎಡಭಾಗಕ್ಕೆ ಗುದ್ದಿ ಹಾನಿ ಮಾಡಿದೆ. ಅದೃಷ್ಟವಶಾತ್ […]