ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಅನುಮತಿ: ಸಾರಿಗೆ ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು: ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ. ಅವರು ಇಂದು ಶಾಂತಿನಗರದ ಕೆಎಸ್​ಆರ್​ಟಿಸಿ ಕಚೇರಿಯಲ್ಲಿ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿ ನಡೆದ ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಪಿಎಲ್‌ ಅಥವಾ ಬಿಪಿಎಲ್‌ ಅಂತ ಹೇಳಿಲ್ಲ. ಹಾಗಾಗಿ, ಕರ್ನಾಟಕದಾದ್ಯಂತ ಮಹಿಳೆಯರಿಗೆ ಉಚಿತ ಪ್ರಯಾಣ ಇರಲಿದೆ ಎಂದು ಅವರು ತಿಳಿಸಿದರು. ಮೇ.29 ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಜೊತೆ […]

ಕೊಲ್ಲೂರು-ಹೆಬ್ರಿ ಮಾರ್ಗದಲ್ಲಿಲ್ಲ ಸರಕಾರಿ ಬಸ್ಸು; ವಿದ್ಯಾರ್ಥಿಗಳು-ಗ್ರಾಮಸ್ಥರ ಗೋಳು ಕೇಳುವವರಿಲ್ಲ

ಕೊಲ್ಲೂರು: ಧಾರ್ಮಿಕ ಮಹತ್ವವಿರುವ ಕೊಲ್ಲೂರಿನಿಂದ ಮುಖ್ಯ ಪೇಟೆ ಹೆಬ್ರಿ ತನಕ ಸರಕಾರಿ ಬಸ್ಸುಗಳು ಓಡಾಟ ನಿಲ್ಲಿಸಿದ್ದು, ಇದರಿಂದ ಗ್ರಾಮಸ್ಥರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನನುಕೂಲವಾಗುತ್ತಿದೆ.ಈ ವರ್ಷದ ಜನವರಿ ಇಂದ ಮೇ ಮಧ್ಯಭಾಗದಲ್ಲಿ ಈ ಮಾರ್ಗದಲ್ಲಿ ಸರಕಾರಿ ಬಸ್ಸುಗಳ ಓಡಾಟವನ್ನು ನಿಲ್ಲಿಸಲಾಗಿದೆ. ಕೊಲ್ಲೂರಿನಿಂದ ಹೆಬ್ರಿಗೆ ಬೆಳಿಗ್ಗೆ 7.30 ಕ್ಕೆ ಬಿಟ್ಟರೆ ಮತ್ತೆ ಮಧ್ಯಾಹ್ನ 2.00 ಗಂಟೆ ತನಕ ಯಾವುದೇ ಬಸ್ಸು ಇರುವುದಿಲ್ಲ. ಇಲ್ಲಿ ಪ್ರತಿ ನಿತ್ಯ ಹಲವಾರು ವಿದ್ಯಾರ್ಥಿಗಳು ಶಂಕರನಾರಾಯಣ ಸರಕಾರಿ ಕಾಲೇಜಿಗೆ ತೆರಳುತ್ತಾರೆ. ಈ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. […]

ಬಸ್ ನಲ್ಲಿ ಟಿಕೆಟ್ ಕೊಳ್ಳಲು ಮಹಿಳೆಯರ ಹಿಂದೇಟು: ರಾಜ್ಯ ಸಾರಿಗೆ ಸಿಬ್ಬಂದಿಗಳ ಪರದಾಟ; ಸಿಎಂಗೆ ಪತ್ರ

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಮಹಿಳೆಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಗಳಲ್ಲಿ ಉಚಿತ ಪ್ರಯಾಣದ ಗ್ಯಾರಂಟಿ ಅನ್ನು ಕಾಂಗ್ರೆಸ್ ಪಕ್ಷವು ನೀಡಿದ್ದು, ಇದೀಗ ಮಹಿಳೆಯರು ಬಸ್ ಪ್ರಯಾಣದ ಸಂದರ್ಭದಲ್ಲಿ ಟಿಕೆಟ್ ಕೊಳ್ಳಲು ನಿರಾಕರಣೆ ಮಾಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಮಹಿಳೆಯರಿಂದ ಟಿಕೆಟ್ ಶುಲ್ಕವನ್ನು ಪಡೆಯಲು ಸಾರಿಗೆ ಸಿಬ್ಬಂದಿಗಳು ಹರಸಾಹಸ ಪಡಬೇಕಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಎಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ […]

ಮೇ 3 ರಂದು ಸಾರಿಗೆ ಕೆ.ಎಸ್.ಆರ್.ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3 ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿರುವುದರಿಂದ, ಸದ್ರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 2 ರಂದು ಚುನಾವಣಾ ತರಬೇತಿ ಕಾರ್ಯಾಗಾರಕ್ಕೆ ತೆರಳುವ ಸಿಬ್ಬಂದಿಗಳಿಗೆ ಉಚಿತ ಬಸ್ ವ್ಯವಸ್ಥೆ

ಉಡುಪಿ: ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯಕ್ಕಾಗಿ ನೇಮಕ ಮಾಡಿರುವ ಪಿಆರ್‌ಓ, ಎಪಿಆರ್‌ಓ, ಪಿಓಗಳಿಗೆ ಮೇ 2 ರಂದು ನಡೆಯುವ ಕಾರ್ಯಾಗಾರಕ್ಕೆ ತೆರಳಲು ಜಿಲ್ಲಾಡಳಿತದ ವತಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಬೈಂದೂರಿನ ಶಿರೂರು ಗ್ರೀನ್ ವ್ಯಾಾಲಿ ಇಂಟರ್‌ನ್ಯಾಷನಲ್ ಸ್ಕೂಲ್, ಕುಂದಾಪುದ ಭಂಡಾರ್ಕರ್ಸ್ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜು ಉಡುಪಿಯ ಸೈಂಟ್ ಸಿಸಿಲಿಸ್ ಸ್ಕೂಲ್ ಬ್ರಹ್ಮಗಿರಿ, ಕಾಪು ದಂಡತೀರ್ಥ ಪಿ.ಯು. ಕಾಲೇಜು, ಕಾರ್ಕಳದ ಕ್ರೈಸ್ಟ್‌ ಕಿಂಗ್ ಪಿ.ಯು. ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ತರಬೇತಿಗೆ ನಿಯೋಜಿಸಿರುವ ಅಧಿಕಾರಿ, ಸಿಬಂದಿಗೆ […]