ಡಾ. ವಿ. ಎಸ್. ಆಚಾರ್ಯ ಮತ್ತು ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರಿಗೆ ಬಸ್ ಗಳ ವೇಳಾಪಟ್ಟಿ
ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನಕಟ್ಟೆ, ಕೆಳಸಂಕ, ಮಲ್ಪೆಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕಾರ್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿ ಹೀಗಿದೆ. ಉಡುಪಿಯಿಂದ ಕಾರ್ಕಳಕ್ಕೆ 6:55, 10:02, 13:47, 16:51, 8:24, 11:32, 14:45, […]
ಬನ್ನಂಜೆ ಡಾ.ವಿ.ಎಸ್ ಆಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸಾರಿಗೆ ಕಾರ್ಯಾಚರಣೆ ಪ್ರಾರಂಭ
ಉಡುಪಿ: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ. ವಿ. ಎಸ್. ಆಚಾರ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಉಡುಪಿ ನಗರ, ಜಿಲ್ಲಾ, ಅಂತರ್ ಜಿಲ್ಲಾ ಮತ್ತು ಅಂತರ್‌ರಾಜ್ಯ ವ್ಯಾಪ್ತಿಯ ಸ್ಥಳಗಳಿಗೆ ನಿಗಮದ ಎಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಮಾಡಲಾಗುತ್ತಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸದರಿ ಸಾರಿಗೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಬಸ್ ನಿಲ್ದಾಣದಲ್ಲಿ 8 ವಾಣಿಜ್ಯ ಮಳಿಗೆ, 1 ಉಪಹಾರ ಗೃಹ, 3 ರಿಟೇಲ್ ಮಳಿಗೆ, ಒಂದು ದ್ವಿಚಕ್ರ /ಕಾರ್ ಪಾರ್ಕಿಂಗ್ ವ್ಯವಸ್ಥೆ, ಮೊದಲ ಅಂತಸ್ತು ಮತ್ತು […]
ಬೆಂಗಳೂರಿನ ಕೆಂಗೇರಿಯಲ್ಲಿ ಬಸ್ ಅಫಘಾತ: 29 ಪ್ರಯಾಣಿಕರು ಗಾಯಾಳು
ಬೆಂಗಳೂರು: ಕೆಂಗೇರಿಯ ಮೈಸೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿ 29 ಜನರು ಗಾಯಗೊಂಡಿದ್ದಾರೆ ಎಂದು ಪಶ್ಚಿಮ ಬೆಂಗಳೂರಿನ ಡಿಸಿಪಿ ಡಾ ಸಂಜೀವ್ ಪಾಟೀಲ್ ಸುದ್ದಿ ಸಂಸ್ಥೆ ಎ ಎನ್ ಐ ಗೆ ತಿಳಿಸಿದ್ದಾರೆ. ಪ್ರಯಾಣಿಕರಲ್ಲಿ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದರೆ, ಉಳಿದವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿ 45 ಮಂದಿ ಪ್ರಯಾಣಿಕರಿದ್ದು ಮಡಿಕೇರಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. Karnataka | 25 people received minor injuries and 4 were […]
ಕಾರ್ಮಿಕ ದಿನಾಚರಣೆ ಉಡುಗೊರೆ: ಕೆಎಸ್‌ಆರ್‌ಟಿಸಿಯ 7,200 ನೌಕರರ ವಿರುದ್ಧದ ಶಿಸ್ತು ಪ್ರಕರಣ ರದ್ದು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕಾರ್ಮಿಕ ದಿನದಂದು ತನ್ನ ಕಾರ್ಮಿಕರಿಗೆ ಉಡುಗೊರೆಯನ್ನು ನೀಡಿದೆ. ಸಂಸ್ಥೆಯ 7,200 ನೌಕರರ ವಿರುದ್ಧ ದಾಖಲಾಗಿದ್ದ ಶಿಸ್ತು ಪ್ರಕರಣಗಳನ್ನು ಒಂದೇ ಬಾರಿಗೆ ಅನ್ವಯಿಸುವಂತೆ ರದ್ದು ಮಾಡಿ ಆದೇಶ ಹೊರಡಿಸಿ ಇತಿಹಾಸ ನಿರ್ಮಿಸಿದೆ. ಕೆಎಸ್‌ಆರ್‌ಟಿಸಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್ ಈ ಆದೇಶವನ್ನು ಹೊರಡಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. 10 ತಿಂಗಳಿಗಿಂತ ಕಡಿಮೆ ಅವಧಿಯ ಒಳಗಿನ ಗೈರು ಹಾಜರಿಯನ್ನು […]
ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಬೈಕ್ ಸವಾರ ಸಾವು
ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜದಲ್ಲಿ ಶುಕ್ರವಾರ ಸಂಭವಿಸಿದೆ. ಸುಳ್ಯ ನಿವಾಸಿ ಶೀನಪ್ಪ ರೈ(53) ಮೃತ ದುರ್ದೈವಿ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಶೀನಪ್ಪ ರೈ ಸುಬ್ರಹ್ಮಣ್ಯದ ಕೆ.ಎಸ್. ಎಸ್.ಕಾಲೇಜಿನಲ್ಲಿ ಗುಮಾಸ್ತನಾಗಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.