ಕುದ್ರೋಳಿ ದೇವಸ್ಥಾನದಲ್ಲಿ ಸಂಭ್ರಮದ ದಸರಾ ಮಹೋತ್ಸವ
ಮಂಗಳೂರು: ಸುಪ್ರಸಿದ್ದ ಮಂಗಳೂರು ದಸರಾದ ಹಿನ್ನಲೆಯಲ್ಲಿ ಕುದ್ರೋಳಿ ದೇವಸ್ಥಾನದ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ಅ.15ರಂದು ನೆರವೇರಿತು. ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿಯ ರೂವಾರಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾರದಾಮಾತೆಯ ಪ್ರತಿಷ್ಠಾಪನೆ ನೆರವೇರಿತು. ಕರ್ಣಾಟಕ ಬ್ಯಾಂಕ್ ಸಿಇಒ ಪ್ರದೀಪ್ ಕುಮಾರ್ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಸೋಮವಾರದಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಅವರು ಕುದ್ರೋಳಿ ದೇವಸ್ಥಾನಕ್ಕೆ ಭೇಟಿ ನೀಡಿ ಶಾರದೆಯ […]