ಮಾರ್ಚ್ 17ರಿಂದ ಮುಂದಿನ ಆದೇಶದವರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಎಲ್ಲ ಸೇವೆಗಳು ರದ್ದು

ಮಂಗಳೂರು: ದಕ್ಷಿಣ ಭಾರತದ ಪವಿತ್ರ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಹೊರತುಪಡಿಸಿ ಎಲ್ಲಾ ಸೇವೆಗಳನ್ನು ಮುಂದಿನ ಆದೇಶದವರೆಗೆ ರದ್ದು ಪಡಿಸಲಾಗಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತಂಗಲು ಅವಕಾಶ ಇರುವುದಿಲ್ಲ ಎಂದು ಆದೇಶ ಹೊರಡಿಸಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಉತ್ಸವಗಳಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನದಲ್ಲಿ ಕೇವಲ ದೇವರ ದರ್ಶನ ಹೊರತುಪಡಿಸಿ ಭಕ್ತಾದಿಗಳು ನೆರವೇರಿಸುವ ಎಲ್ಲಾ ರೀತಿಯ ಸೇವೆಗಳನ್ನು ಮುಂದಿನ […]