ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ 2 ಕೋ.ರೂ. ವೆಚ್ಚದ ಬ್ರಹ್ಮರಥ
ಉಡುಪಿ: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಎನ್. ಮುತ್ತಪ್ಪ ರೈ ಹಾಗೂ ಉದ್ಯಮಿ ಅಜಿತ್ ಶೆಟ್ಟಿ ಅವರು ಜಂಟಿಯಾಗಿ ಅಕ್ಟೋಬರ್ 2ರಂದು ಎರಡು ಕೋಟಿ ವೆಚ್ಚದ ಬ್ರಹ್ಮರಥವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಣಿಕೆ ರೂಪದಲ್ಲಿ ಅರ್ಪಣೆ ಮಾಡಲಿದ್ದಾರೆ ಎಂದು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ನೂತನ ಬ್ರಹ್ಮರಥದ ಸಮರ್ಪಣೆಯ ಪೂರ್ವಭಾವಿಯಾಗಿ ಸೆ. 30ರಂದು ಬೆಳಿಗ್ಗೆ 9ಗಂಟೆಗೆ ಕೋಟೇಶ್ವರದಿಂದ ಸುಬ್ರಹ್ಮಣ್ಯದವರೆಗೆ ಭವ್ಯ ಮೆರವಣಿಗೆ ಹೊರಡಲಿದೆ. ಅಲ್ಲಿಂದ ಸಾಲಿಗ್ರಾಮ, […]