ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪೂಜೆಗಳ ಬಗ್ಗೆ ತಪ್ಪು ಮಾಹಿತಿ: ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ನಡೆಯುವ ಪೂಜೆಗಳ ಕುರಿತು ತಪ್ಪುಮಾಹಿತಿ ನೀಡುತ್ತಿದ್ದ ಯೂಟ್ಯೂಬ್ ಚಾನೆಲ್​ ವಿರುದ್ಧ ದೇಗುಲದ ಕಾರ್ಯನಿರ್ವಹಣಾಧಿಕಾರಿ ಎಂ.ಎಚ್. ರವೀಂದ್ರ ಅವರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ‘ರಜಿನಿ ಅಪ್ಡೇಟ್ಸ್’ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರು ಬಳಸಿ ಭಕ್ತಾದಿಗಳಿಗೆ ತಪ್ಪು ಮಾಹಿತಿ ನೀಡಿ ಗೊಂದಲ ಸೃಷ್ಟಿಸುತ್ತಿದ್ದು, ಭಕ್ತಾದಿಗಳನ್ನು ವಂಚಿಸುತ್ತಿದ್ದಾರೆ. ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಯೂಟ್ಯೂಬ್ ಚಾನೆಲ್ […]