ಮಂಗಳೂರು: ಕುಳಾಯಿ ಫೌಂಡೇಶನ್ ನಿಂದ ಬಡ ಮಕ್ಕಳ ದತ್ತು ಸ್ವೀಕಾರ
ಮಂಗಳೂರು: ಸ್ತ್ರೀ ಸಬಲೀಕರಣ, ಬಡಮಕ್ಕಳ ಶಿಕ್ಷಣ ಹಾಗೂ ಸರಕಾರಿ ಶಾಲೆಗಳ ಅಭಿವೃದ್ದಿಯ ಧ್ಯೇಯವನ್ನಿಟ್ಟುಕೊಂಡು ಕುಳಾಯಿ ಫೌಂಡೇಶನ್ ಅನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ಸುಮಾರು 250 ವಿದ್ಯಾರ್ಥಿಗಳ ಸಂಪೂರ್ಣ ವಿದ್ಯಾಭ್ಯಾಸದ ಖರ್ಚು ವೆಚ್ಚ ನಿಭಾಯಿಸುವ ಜೊತೆಗೆ ಅವರನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದತ್ತು ಪಡೆಯುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಫೌಂಡೇಶನಿನ ಸಂಸ್ಥಾಪಕಿ ಪ್ರತಿಭಾ ಕುಳಾಯಿ ಹೇಳಿದರು. ಗುರುವಾರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ […]