ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಕುಮಾರ್ ಸುವರ್ಣ ನೇಮಕ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ವಿವಿಧ ಬ್ಲಾಕ್ ಗಳಿಗೆ ಪದಾಧಿಕಾರಿಗಳ ನೇಮಕವಾಗುತ್ತಿದ್ದು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ಘಟಕದ ಅಧ್ಯಕ್ಷರಾಗಿ ಬೈಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಮಾರ್ ಸುವರ್ಣ ಅವರನ್ನು,ಜಿಲ್ಲಾಧ್ಯಕ್ಷ ಸಂಕಪ್ಪ ಎ ನೇಮಕ ಗೊಳಿಸಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು ಸೂಚನೆಯಂತೆ, ಹಿಂದುಳಿದ ಘಟಕದ ರಾಜ್ಯಾಧ್ಯಕ್ಷ ಲಕ್ಷ್ಮೀನಾರಾಯಣ್ ನೂತನ ಪದಾಧಿಕಾರಿಗಳ ಪಟ್ಟಿಗೆ ಅನುಮೋದನೆ ನೀಡಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ಘಟಕಗಳ ಅಧ್ಯಕ್ಷ […]