ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಕುಮಾರಸ್ವಾಮಿ

ಉಡುಪಿ: ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಭಾನುವಾರ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೇಜಾವರ ಮಠಕ್ಕೆ ಭೇಟಿ ನೀಡಿ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಪೇಜಾವರ ಕಿರಿಯ ವಿಶ್ವಪ್ರಸನ್ನ ಸ್ಗಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಉಡುಪಿ ಚೊಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿಇದ್ದರು.

ಮೋದಿ ಮಂಗಳೂರು ಮೂಲದ ಸಂಸ್ಥೆಗಳನ್ನ ದಿವಾಳಿ ಎಬ್ಬಿಸಿದ್ದಾರೆ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಕುಮಾರಸ್ವಾಮಿ

ಉಡುಪಿ: ಉಡುಪಿ ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಇಂದು ಉಡುಪಿಗೆ ಬಂದಿದ್ದ ಸಿಎಂ ಕುಮಾರಸ್ವಾಮಿ, ಕೇಂದ್ರ ಬಿಜೆಪಿ ಸರಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು.  ಮಂಡ್ಯ ರಾಜಕೀಯ ಕುರಿತು ಪ್ರತಿಕ್ರಿಯಿಸಿದ ಎಚ್ ಡಿಕೆ, ಮಂಡ್ಯದಲ್ಲಿ ನಮ್ಮನ್ನು ಮುಗಿಸಲು ಮೊದಲೇ ಪ್ಲಾನ್ ಆಗಿತ್ತು  ಎಂದು ಹೇಳಿದರು. ಬಿಜೆಪಿ ಪ್ರಚಾರಕ್ಕೆ ಮೋದಿಯೇ ಮುಖ. ಮೋದಿ ಇಲ್ಲಾಂದ್ರೆ ದೇಶಕ್ಕೆ ರಕ್ಷಣೆ ಇಲ್ಲ ಅಂತ ಬಿಂಬಿಸಲಾಗ್ತಿದೆ ಎಂದು ಹೇಳಿದರು. ಕರಾವಳಿಯ ಮೂರು ಜಿಲ್ಲೆಗಳ ಜನರು ತಿಳುವಳಿಕೆ ಉಳ್ಳವರು, ಪ್ರಜ್ಞಾವಂತರು ತಿಳುವಳಿಕ ಇರುವ […]

ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ತರಬೇಕು ಎನ್ನುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನಿರಂತರವಾಗಿ ಐಟಿ ದಾಳಿಯನ್ನು ಸಂಘಟಿಸುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನಮ್ಮ ಕುಟುಂಬ ಸದಸ್ಯರು ಹಾಗೂ ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ತರಬೇಕು ಎನ್ನುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನಿರಂತರವಾಗಿ ಐಟಿ ದಾಳಿಯನ್ನು ಸಂಘಟಿಸುತ್ತಿದೆ. ಇಂತಹ ವ್ಯವಸ್ಥಿತ ದಾಳಿಯಿಂದ ಯಾವುದೆ ರೀತಿಯಿಂದಲೂ ನಾವು ಆತಂಕಕ್ಕೆ ಒಳಗಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಲ್ಲಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೌಕೂರು ಬೀದಿ ಮನೆಯ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ (ಹೆಬ್ಬಾರ್) ಅವರ ಮನೆಗೆ ಭೇಟಿ ನೀಡಿದ ವೇಳೆ ಅವರು ಮಾಧ್ಯಮ […]