ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
ಕುಂದಾಪುರ: ಇಲ್ಲಿನ ಪ್ರಸಿದ್ದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಡಿ.16 ರಂದು ಬ್ರಹ್ಮರಥೋತ್ಸವ ಹಾಗೂ ಅಷ್ಟೋತ್ತರ ಸಹಸ್ರ ನಾರಿಕೇಳ ಗಣಯಾಗದ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗುವ ಮೂಲಕ ವಿದ್ಯುಕ್ತ ಚಾಲನೆ ನೀಡಲಾಯಿತು. ರಥೋತ್ಸವ ಪ್ರಯುಕ್ತ ಬುಧವಾರದಂದು ಬೆಳಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ, ಸ್ವಸ್ತಿವಾಚನ, ಗಣಹೋಮ, ಅಥರ್ವಶೀರ್ಷ, ಉಪನಿಷತ್ ಹೋಮ, ಸತ್ಯಗಣಪತಿ ವೃತ, ಮಹಾಪೂಜೆ, ರಂಗಪೂಜೆ, ಡೋಲಾರೋಹಣ, ಪಲ್ಲಕ್ಕಿ ಉತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಸ್ಥಾನದ ಅನುವಂಶಿಕ ಆಡಳಿತ ಧರ್ಮದರ್ಶಿಗಳಾದ […]
ಸಪತ್ನೀಕ ಸಮೇತರಾಗಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ
ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಪತ್ನೀಕ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.