ಗುಂಡೆಸೆತ ಸ್ಪರ್ಧೆ: ಜನತಾ ಸ್ವತಂತ್ರ ಪ.ಪೂ ಕಾಲೇಜಿನ ಆರ್ಯ ಮೊಗವೀರ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆರ್ಯ ಮೊಗವೀರ ‘ಗುಂಡು ಎಸೆತ’ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ. ವಿದ್ಯಾರ್ಥಿಯ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಬೋಧಕ, ಬೋದಕೇತರ ವೃಂದದವರು ಅಭಿನಂದಿಸಿದ್ದಾರೆ.
ಸಿಇಟಿ ಫಲಿತಾಂಶದಲ್ಲಿ ವೆಂಕಟರಮಣ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪುರ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಮಟ್ಟದ ರ‍್ಯಾಂಕುಗಳೊಂದಿಗೆ ಗುರುತಿಸಿಕೊಂಡ ಕಾಲೇಜು ಇದೀಗ ಸಿಇಟಿ ಫಲಿತಾಂಶದಲ್ಲಿ ಅಪೂರ್ವ ಸಾಧನೆ ಮೆರೆದಿದೆ. 2021 – 22ನೇ ಸಾಲಿನ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ( ಕೆ-ಸಿಇಟಿ) ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀವರ್ಷ (ಎಂಜಿನಿಯರಿಂಗ್- 422 ), ಮನೀಶ್ ಹೆಬ್ಬಾರ್ (ಎಂಜಿನಿಯರಿಂಗ್ – 1090, ಎಗ್ರಿಕಲ್ಚರ್- 287, ವೆರ್ಟನರಿ- 1100, ಬಿಎನ್‌ವೈಎಸ್ -505 ), ಕೀರ್ತನ್ ಕಿಣಿ (ಎಂಜಿನಿಯರಿಂಗ್- 1139), ಯು. […]